ಲಂಡನ್ : 24 ಗ್ರಾನ್‌ಸ್ಲಾಮ್ ಪ್ರಶಸ್ತಿಗಳ ಒಡೆಯ ನೋವಾಕ್ ಜೋಕೋವಿಕ್ ಅವರು ವಿಂಬಲ್ಡನ್ ಟೆನಿಸ್ ಚಾಂಪಿಯನ್‌ಶಿಪ್‌ನಲ್ಲಿ ಮೊದಲ ಸುತ್ತಿನ ಪಂದ್ಯದಲ್ಲಿ ಚೀನಾದ ವು ಯಿಬಿಂಗ್ ಅವರನ್ನು ಮಣಿಸುವ ಮೂಲಕ ಭರ್ಜರಿ ಶುಭಾರಂಭ ಮಾಡಿದ್ದಾರೆ. ಪುರುಷರ ಸಿಂಗಲ್ಸ್ ವಿಭಾಗದ ಮೊದಲ ಸುತ್ತಿನ ಪಂದ್ಯದಲ್ಲಿ ಜೋಕೋವಿಕ್ ಅವರು ಚೀನಾದ ಆಟಗಾರ ವು ಯಿಬಿಂಗ್ ವಿರುದ್ಧ 6-4, 5-7, 6-4, 6-4 ಸೆಟ್‌ಗಳ ಅಂತರದಿಂದ ರೋಚಕ ಜಯ ಸಾಧಿಸಿದರು. ಈ ಮೂಲಕ ದಾಖಲೆಯ ಎಂಟನೇ ವಿಂಬಲ್ಡನ್ ಪ್ರಶಸ್ತಿ ಗೆಲ್ಲುವತ್ತ ತಮ್ಮ ಮೊದಲ ಹೆಜ್ಜೆ ಇಟ್ಟಿದ್ದಾರೆ. 39 ವರ್ಷದ ಜೋಕೋವಿಕ್ ಅವರು ಆಲ್ ಇಂಗ್ಲೆಂಡ್ ಕ್ಲಬ್‌ನಲ್ಲಿ ರೋಜರ್ ಫೆಡರರ್ ಅವರ ದಾಖಲೆಯನ್ನು ಸರಿಗಟ್ಟಲು ಹಾಗೂ ಗ್ರಾನ್‌ಸ್ಲಾಮ್ ಪ್ರಶಸ್ತಿಗಳ ಸಾರ್ವಕಾಲಿಕ ಪಟ್ಟಿಯಲ್ಲಿ ಮಾರ್ಗರೆಟ್ ಕೋರ್ಟ್ ಅವರನ್ನು ಹಿಂದಿಕ್ಕಲು ಬಯಸಿದ್ದಾರೆ.