ಲಂಡನ್ : ಮೂರನೇ ಸುತ್ತಿನ ಪಂದ್ಯದಲ್ಲಿ ಮಕ್ರೋಸ್ ಗಿರೋನ್‌ನನ್ನು ಮಣಿಸಿದ ಫ್ರೆಂಚ್ ಓಪನ್ ಚಾಂಪಿಯನ್ ಅಲೆಕ್ಸಾಂಡರ್ ಜ್ವೆರೆವ್ ವಿಂಬಲ್ಡನ್ ಚಾಂಪಿಯನ್‌ಶಿಪ್‌ನಲ್ಲಿ ಮೊದಲ ಬಾರಿ ಕ್ವಾರ್ಟರ್ ಫೈನಲ್ ತಲುಪಲು ಸಜ್ಜಾಗಿದ್ದಾರೆ. ಶನಿವಾರ ನಡೆದ ಪುರುಷರ ಸಿಂಗಲ್ಸ್ ವಿಭಾಗದ ಎರಡನೇ ಸುತ್ತಿನ ಪಂದ್ಯದಲ್ಲಿ ಜ್ವೆರೆವ್ ಅವರು 92ನೇ ಶ್ರೇಯಾಂಕದ ಗಿರೋನ್‌ನನ್ನು 6-2, 7-6(7/4), 6-4 ಸೆಟ್‌ಗಳ ಅಂತರದಿಂದ ಮಣಿಸಿದರು. ಅಂತಿಮ-16ರ ಸುತ್ತಿನಲ್ಲಿ ಜ್ವೆರೆವ್ ಅವರು 13ನೇ ಶ್ರೇಯಾಂಕದ ಜಿರಿ ಲೆಹೆಕಾನನ್ನು ಎದುರಿಸಲಿದ್ದಾರೆ. ಜರ್ಮನಿಯ ಆಟಗಾರ ಜ್ವೆರೆವ್ ಆಲ್ ಇಂಗ್ಲೆಂಡ್ ಕ್ಲಬ್‌ನಲ್ಲಿ ಹಿಂದಿನ 9 ಪ್ರಯತ್ನಗಳಲ್ಲಿ ಒಂದು ಬಾರಿಯೂ ನಾಲ್ಕನೇ ಸುತ್ತನ್ನು ದಾಟಿಲ್ಲ. ಆದರೆ ಈ ಬಾರಿ ಕ್ವಾರ್ಟರ್ ಫೈನಲ್ ತಲುಪುವ ವಿಶ್ವಾಸದಲ್ಲಿದ್ದಾರೆ.
ಮತ್ತೊಂದೆಡೆ, ಮಹಿಳೆಯರ ಸಿಂಗಲ್ಸ್ ವಿಭಾಗದಲ್ಲಿ ಅಮೆರಿಕದ ಆಟಗಾರ್ತಿ ಮ್ಯಾಡಿಸನ್ ಕೀಸ್ ತಮ್ಮದೇ ದೇಶದ ಅಮಂಡಾ ಅನಿಸಿಮೋವಾರನ್ನು ಮಣಿಸಿ ನಾಲ್ಕನೇ ಸುತ್ತು ತಲುಪಿದ್ದಾರೆ. 26ರ ವಯಸ್ಸಿನ ಮ್ಯಾಡಿಸನ್ 3-6, 6-2, 6-3 ಸೆಟ್‌ಗಳ ಅಂತರದಿಂದ ಜಯಶಾಲಿಯಾಗಿ ಮುಂದಿನ ಸುತ್ತಿಗೆರಿದರು. 31ರ ವಯಸ್ಸಿನ ಮಾಜಿ ಆಸ್ಟ್ರೇಲಿಯನ್ ಓಪನ್ ಚಾಂಪಿಯನ್ ಮ್ಯಾಡಿಸನ್ ಸೋಮವಾರ ನಡೆಯಲಿರುವ ಪಂದ್ಯದಲ್ಲಿ 9ನೇ ಶ್ರೇಯಾಂಕದ ಲಿಂಡಾ ನೊಸ್ಕೋವಾರನ್ನು ಎದುರಿಸಲಿದ್ದಾರೆ.