ವಿಟ್ಲ: ಬಸ್‌ನಲ್ಲಿ ಹಾಗೂ ಮನೆಗೆ ತೆರಳಿ ಅಪ್ರಾಪ್ತ ಬಾಲಕನಿಗೆ ಲೈಂಗಿಕ ಕಿರುಕುಳ ನೀಡಿ, ಬೆದರಿಕೆ ಒಡ್ಡಿದ್ದ ಆರೋಪಿಯನ್ನು ವಿಟ್ಲ ಠಾಣಾ ಪೊಲೀಸರು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ನ್ಯಾಯಾಲಯವು ಆರೋಪಿಗೆ ನ್ಯಾಯಾಂಗ ಬಂಧನ ವಿಧಿಸಿ ಆದೇಶಿಸಿದೆ.
ಆಗಸ್ಟ್ 15, 2026 ರಂದು ವಿಟ್ಲ ಠಾಣಾ ವ್ಯಾಪ್ತಿಯ ಅಳಿಕೆಯಿಂದ ಪುತ್ತೂರು ಕಡೆಗೆ ಬಸ್ಸಿನಲ್ಲಿ ತೆರಳುತ್ತಿದ್ದ ಅಪ್ರಾಪ್ತ ಸಂತ್ರಸ್ಥ ಬಾಲಕನೊಂದಿಗೆ, ವಿಟ್ಲ ಖಾಸಗಿ ಬಸ್ ನಿಲ್ದಾಣದಲ್ಲಿ ಬಸ್ ಹತ್ತಿದ ಅಪರಿಚಿತ ವ್ಯಕ್ತಿಯೊಬ್ಬರು ಅಸಭ್ಯವಾಗಿ ವರ್ತಿಸಿ ಅನುಚಿತವಾಗಿ ನಡೆದುಕೊಂಡಿದ್ದರು. ಬಳಿಕ ಬಾಲಕನು ತನ್ನ ಮನೆಗೆ ತೆರಳಿದಾಗ ಅಲ್ಲಿಗೂ ಬೆಂಬಿಟ್ಟು ಬಂದಿದ್ದ ಆ ವ್ಯಕ್ತಿ, ಬಾಲಕನಿಗೆ ಲೈಂಗಿಕ ಕಿರುಕುಳ ನೀಡಿ ಜೀವ ಬೆದರಿಕೆ ಒಡ್ಡಿದ್ದನು.
ಈ ಕುರಿತು ಬಾಲಕನ ಪೋಷಕರು ಮತ್ತು ಸಂತ್ರಸ್ಥನ ದೂರಿನ ಮೇರೆಗೆ ವಿಟ್ಲ ಪೊಲೀಸ್ ಠಾಣೆಯಲ್ಲಿ ಅ.ಕ್ರ: 179/2026, ಕಲಂ: 4(2) ಪೋಕ್ಸೋ ಕಾಯ್ದೆ 2012 ಹಾಗೂ ಕಲಂ: 351(2) ಬಿ.ಎನ್.ಎಸ್ (BNS) 2023 ರಡಿ ಪ್ರಕರಣ ದಾಖಲಿಸಿಕೊಳ್ಳಲಾಗಿತ್ತು.
ಪ್ರಕರಣದ ಗಂಭೀರತೆಯನ್ನು ಪರಿಗಣಿಸಿ ತನಿಖೆ ಕೈಗೊಂಡ ವಿಟ್ಲ ಠಾಣa ಪೊಲೀಸರು, ಕೃತ್ಯವೆಸಗಿದ ಆರೋಪಿಯನ್ನು ವಿಟ್ಲ ಕೊಂಡಗಾಯಿ ನಿವಾಸಿ ಉಮೇಶ್ (53) ಎಂದು ಗುರುತಿಸಿ ದಸ್ತಗಿರಿ ಮಾಡಿದ್ದಾರೆ. ನಂತರ ಆರೋಪಿಯನ್ನು ಮಾನ್ಯ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ವಿಚಾರಣೆ ನಡೆಸಿದ ನ್ಯಾಯಾಲಯವು ಆರೋಪಿಗೆ ನ್ಯಾಯಾಂಗ ಬಂಧನ ವಿಧಿಸಿದೆ.