image image
ಬ್ರೇಕಿಂಗ್ ನ್ಯೂಸ್
ಬ್ರೇಕಿಂಗ್ ನ್ಯೂಸ್

ದ್ವಿಚಕ್ರ ವಾಹನ ಕಳ್ಳತನ ಮಾಡಿದ್ದ ಕುಖ್ಯಾತ ಆರೋಪಿ ಬಂಧನ

ದ್ವಿಚಕ್ರ ವಾಹನ ಕಳ್ಳತನ ಮಾಡಿದ್ದ ಕುಖ್ಯಾತ ಆರೋಪಿ ಬಂಧನ

ಮಂಗಳೂರು: ನಗರದ ಉರ್ವ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ದ್ವಿಚಕ್ರ ವಾಹನ ಕಳ್ಳತನ ಮಾಡಿದ್ದ ಕುಖ್ಯಾತ ಆರೋಪಿಯೊಬ್ಬನನ್ನು ಪೊಲೀಸರು ಬಂಧಿಸಿದ್ದಾರೆ.

​ಮಂಗಳೂರು ನಗರದ ಉರ್ವ ಪೊಲೀಸ್ ಠಾಣಾ ವ್ಯಾಪ್ತಿಯ ಕೋಡಿಯಿಕಲ್ ಎಂಬಲ್ಲಿ ವಾಸದ ಮನೆಯ ಎದುರು ನಿಲ್ಲಿಸಿದ್ದ KA-19-EB-2226 ನೋಂದಣಿಯ ಹೋಂಡಾ ಡಿಯೋ ಸ್ಕೂಟರ್ ಕಳುವಾಗಿರುವ ಬಗ್ಗೆ ಜುಲೈ 24, 2026 ರಂದು ಉರ್ವ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಈ ಪ್ರಕರಣದಲ್ಲಿ ತನಿ ಕೈಗೊಂಡ ಉರ್ವ ಪೊಲೀಸ್ ಠಾಣೆಯ ಅಧಿಕಾರಿ ಹಾಗೂ ಸಿಬ್ಬಂದಿಗಳು ಸುತ್ತಮುತ್ತಲಿನ ಸಿಸಿಟಿವಿ ಕ್ಯಾಮೆರಾಗಳನ್ನು ಪರಿಶೀಲಿಸಿ, ಆರೋಪಿಯ ಜಾಡು ಪತ್ತೆಹಚ್ಚಿ, ಚಹರೆಯನ್ನು ಗುರುತಿಸಿ, ಬಾತ್ಮೀದಾರರಿಂದ ಮಾಹಿತಿ ಸಂಗ್ರಹಿಸಿ ಆರೋಪಿತ ಹಾಗೂ ಕಳುವಾಗಿದ್ದ ದ್ವಿಚಕ್ರ ವಾಹನವನ್ನು ಆಗಸ್ಟ್ 18, 2026 ರಂದು ಪತ್ತೆ ಮಾಡಿರುತ್ತಾರೆ.
​ಬಂಧಿತ ಆರೋಪಿಯನ್ನು ಮಹಮ್ಮದ್ ಫೈಜಲ್ @ ತೋಟೆ ಫೈಜಲ್ (ವಯಸ್ಸು 40, ತಂದೆ: ದಿ|| ಇಬ್ರಾಹಿಂ, ವಾಸ: ಬೈತುಲ್ ಕೌಸರ್, ನ್ಯೂ ತೋಟೆ ಹೌಸ್, ಕೋಡಿ, ಉಳ್ಳಾಲ, ಮಂಗಳೂರು) ಎಂದು ಗುರುತಿಸಲಾಗಿದೆ.

ಸದರಿ ಆರೋಪಿಯ ವಿರುದ್ಧ ಕರ್ನಾಟಕ ಹಾಗೂ ಕೇರಳ ರಾಜ್ಯಗಳ ವಿವಿಧ ಪೊಲೀಸ್ ಠಾಣೆಗಳಲ್ಲಿ ಸುಮಾರು 40ಕ್ಕೂ ಅಧಿಕ ಪ್ರಕರಣಗಳು ದಾಖಲಾಗಿರುವುದು ತಿಳಿದುಬಂದಿರುತ್ತದೆ. ಅಲ್ಲದೇ, ಆರೋಪಿಯ ವಿರುದ್ಧ ಮಂಗಳೂರು ನಗರದ ಉತ್ತರ ಪೊಲೀಸ್ ಠಾಣೆ, ಕೊಣಾಜೆ ಪೊಲೀಸ್ ಠಾಣೆ, ಉಳ್ಳಾಲ ಪೊಲೀಸ್ ಠಾಣೆ, ಮೂಡುಬಿದ್ರೆ ಪೊಲೀಸ್ ಠಾಣೆ, ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆ ಹಾಗೂ ಮಣಿಪಾಲ ಪೊಲೀಸ್ ಠಾಣೆಗಳಲ್ಲಿ ಪ್ರಸ್ತುತ ದಸ್ತಗಿರಿ ವಾರೆಂಟ್ ಇರುವುದು ತನಿಖೆಯ ವೇಳೆ ತಿಳಿದುಬಂದಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Category
ಕರಾವಳಿ ತರಂಗಿಣಿ