image image
ಬ್ರೇಕಿಂಗ್ ನ್ಯೂಸ್
ಬ್ರೇಕಿಂಗ್ ನ್ಯೂಸ್

ಅಪ್ರಾಪ್ತ ಬಾಲಕಿಯನ್ನು ಹಿಂಬಾಲಿಸಿ ಲೈಂಗಿಕ ಕಿರುಕುಳ ನೀಡಿದಾತ ಪೊಲೀಸರ ವಶಕ್ಕೆ

ಅಪ್ರಾಪ್ತ ಬಾಲಕಿಯನ್ನು ಹಿಂಬಾಲಿಸಿ ಲೈಂಗಿಕ ಕಿರುಕುಳ ನೀಡಿದಾತ ಪೊಲೀಸರ ವಶಕ್ಕೆ

ಬಂಟ್ವಾಳ: ಅಪ್ರಾಪ್ತ ವಯಸ್ಸಿನ ಕಾಲೇಜು ವಿದ್ಯಾರ್ಥಿನಿಯೊಬ್ಬಳಿಗೆ ಬಸ್‌ನಲ್ಲಿ ಹಾಗೂ ಬಸ್ ನಿಲ್ದಾಣದಲ್ಲಿ ನಿರಂತರವಾಗಿ ಹಿಂಬಾಲಿಸಿ ಲೈಂಗಿಕ ಕಿರುಕುಳ ನೀಡಿದ ಆರೋಪಿಯನ್ನು ಬಂಟ್ವಾಳ ನಗರ ಠಾಣೆಯ ಪೊಲೀಸರು ಬಂಧಿಸಿದ್ದಾರೆ.

ಸರಪಾಡಿ ನಿವಾಸಿ ಜಯಂತ್ (47) ಬಂಧಿತ ಆರೋಪಿ. ಬಾಲಕಿಯು ಬಂಟ್ವಾಳ ನಗರ ಠಾಣಾ ವ್ಯಾಪ್ತಿಯಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದು, ಕೆಲ ದಿನಗಳಿಂದ ಮಧ್ಯವಯಸ್ಸಿನ ಈ ವ್ಯಕ್ತಿ ಬಾಲಕಿ ಬಸ್‌ನಲ್ಲಿ ಬರುವಾಗ ಹಿಂಬಾಲಿಸುತ್ತಿದ್ದನು. ಆಗಸ್ಟ್ 19 ರಂದು ಸಂಜೆ ಕಲ್ಲಡ್ಕ ಬಸ್ ನಿಲ್ದಾಣಕ್ಕೆ ಬಂದಾಗಲೂ ಅದೇ ವ್ಯಕ್ತಿ ಬಾಲಕಿಯನ್ನೇ ದಿಟ್ಟಿಸಿ ನೋಡಿ ಕಿರುಕುಳ ನೀಡಿದ್ದನು. ಇದರಿಂದ ಭಯಭೀತರಾದ ಬಾಲಕಿ ತನ್ನ ಪೋಷಕರಿಗೆ ವಿಷಯ ಮುಟ್ಟಿಸಿದ್ದರು.

ಕೂಡಲೇ ಪೋಷಕರು ಸ್ಥಳಕ್ಕೆ ಬಂದು ವಿಚಾರಿಸಿದಾಗ ಆತ ತನ್ನ ಹೆಸರು ಜಯಂತ್ ಎಂದು ತಿಳಿಸಿ ಅಲ್ಲಿಂದ ಪರಾರಿಯಾಗಲು ಯತ್ನಿಸಿದ್ದನು. ಈ ಕುರಿತು ಬಾಲಕಿಯ ತಾಯಿ ನೀಡಿದ ದೂರಿನ ಮೇರೆಗೆ ಬಂಟ್ವಾಳ ನಗರ ಠಾಣೆಯಲ್ಲಿ ಅ.ಕ್ರ: 116/2026, ಕಲಂ: 78 ಬಿ.ಎನ್.ಎಸ್ ಮತ್ತು ಕಲಂ 12 ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ. ತನಿಖೆ ಕೈಗೊಂಡ ಪೊಲೀಸರು ಆರೋಪಿಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿ ಮಾನ್ಯ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.

Category
ಕರಾವಳಿ ತರಂಗಿಣಿ