image image
ಬ್ರೇಕಿಂಗ್ ನ್ಯೂಸ್
ಬ್ರೇಕಿಂಗ್ ನ್ಯೂಸ್

ಮುಲ್ಕಿಯ ಚಂದ್ರಮೌಳೇಶ್ವರ ದೇವಸ್ಥಾನದ ಹುಂಡಿ ಕಳ್ಳತನ: ಆರೋಪಿ ಬಂಧನ, ನಗದು ವಶ

ಮುಲ್ಕಿಯ ಚಂದ್ರಮೌಳೇಶ್ವರ ದೇವಸ್ಥಾನದ ಹುಂಡಿ ಕಳ್ಳತನ: ಆರೋಪಿ ಬಂಧನ, ನಗದು ವಶ

ಮಂಗಳೂರು: ಮುಲ್ಕಿ ಪೊಲೀಸ್ ಠಾಣಾ ವ್ಯಾಪ್ತಿಯ ಚಂದ್ರಮೌಳೇಶ್ವರ ದೇವಸ್ಥಾನದಲ್ಲಿ ಕಾಣಿಕೆ ಹುಂಡಿ ಕಳ್ಳತನ ಮಾಡಿದ್ದ ಆರೋಪಿಯನ್ನು ಮುಲ್ಕಿ ಪೊಲೀಸರು ಯಶಸ್ವಿಯಾಗಿ ಬಂಧಿಸಿದ್ದು, ಕಳುವಾದ ನಗದನ್ನು ವಶಪಡಿಸಿಕೊಂಡಿದ್ದಾರೆ.

​ಆಗಸ್ಟ್ 18, 2026ರಂದು ಮಧ್ಯರಾತ್ರಿ ಮುಲ್ಕಿಯ ಚಂದ್ರಮೌಳೇಶ್ವರ ದೇವಸ್ಥಾನದ ಮೇಲ್ಛಾವಣಿಯ ಜಾಲರಿಯ ಮೂಲಕ ಒಳಪ್ರವೇಶಿಸಿದ ಕಳ್ಳನು, ಸಿಸಿಟಿವಿ ಕ್ಯಾಮೆರಾವನ್ನು ತಿರುಗಿಸಿ ಕಾಣಿಕೆ ಡಬ್ಬಿಯ ಬೀಗ ಮುರಿದು ಕಳ್ಳತನ ಎಸಗಿದ್ದನು. ಈ ಕೃತ್ಯಕ್ಕೆ ಸಂಬಂಧಿಸಿದಂತೆ ಮುಲ್ಕಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

​ಈ ಪ್ರಕರಣದ ಪ್ರಮುಖ ಆರೋಪಿಯಾದ ಕೊಡಗು ಜಿಲ್ಲೆ ಮಡಿಕೇರಿ ತಾಲೂಕಿನ ಅಯ್ಯಂಗೇರಿ ಪೋಸ್ಟ್ ಸಣ್ಣಪುಲಿಕೊಟ್ಟ ಗ್ರಾಮದ ಅಜ್ಜಿಮಡ ನಿವಾಸಿ ರವಿಕುಮಾರ್ @ ರವಿ ಹೆಚ್.ಜಿ. (20), ತಂದೆ: ದಿ. ಗೋಪಾಲ ಎಂಬಾತನನ್ನು ಪೊಲೀಸರು ದಸ್ತಗಿರಿ ಮಾಡಿದ್ದಾರೆ. ಆರೋಪಿಯಿಂದ ಕಳುವಾಗಿದ್ದ ಒಟ್ಟು 2,195 ರೂ. ನಗದನ್ನು ವಶಪಡಿಸಿಕೊಳ್ಳಲಾಗಿದ್ದು, ಆರೋಪಿಯನ್ನು ಮಾನ್ಯ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ. ಮುಲ್ಕಿ ಠಾಣೆಯ ಪಿಎಸ್‌ಐ ಹಾಗೂ ಸಿಬ್ಬಂದಿ ತಂಡ ಈ ಕಾರ್ಯಾಚರಣೆ ನಡೆಸಿದೆ.

​ಆರೋಪಿ ರವಿಕುಮಾರ್ ವಿರುದ್ಧ ಈಗಾಗಲೇ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ವಿವಿಧ ಅಪರಾಧ ಕೃತ್ಯಗಳಿಗೆ ಸಂಬಂಧಿಸಿದಂತೆ ಹಲವಾರು ಪ್ರಕರಣಗಳು ದಾಖಲಾಗಿರುವುದು ತನಿಖೆಯಿಂದ ತಿಳಿದುಬಂದಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Category
ಕರಾವಳಿ ತರಂಗಿಣಿ