image image
ಬ್ರೇಕಿಂಗ್ ನ್ಯೂಸ್
ಬ್ರೇಕಿಂಗ್ ನ್ಯೂಸ್

ಗೋವಾದಿಂದ ಮಂಗಳೂರಿಗೆ ಅಕ್ರಮವಾಗಿ ಸಾಗಿಸುತ್ತಿದ್ದ 438 ಲೀಟರ್ ಮದ್ಯ ವಶ: ಇಬ್ಬರ ಬಂಧನ

ಗೋವಾದಿಂದ ಮಂಗಳೂರಿಗೆ ಅಕ್ರಮವಾಗಿ ಸಾಗಿಸುತ್ತಿದ್ದ 438 ಲೀಟರ್ ಮದ್ಯ ವಶ: ಇಬ್ಬರ ಬಂಧನ

ಮಂಗಳೂರು: ಗೋವಾದಿಂದ ಮಂಗಳೂರು ಮತ್ತು ಉಡುಪಿ ಮೂಲಕ ಕೇರಳಕ್ಕೆ ಅಕ್ರಮವಾಗಿ ಮದ್ಯ ಸಾಗಿಸುತ್ತಿದ್ದ ಜಾಲವನ್ನು ಅಬಕಾರಿ ವಿಶೇಷ ತಂಡ ಯಶಸ್ವಿಯಾಗಿ ಪತ್ತೆಹಚ್ಚಿದ್ದು, ಬೃಹತ್ ಪ್ರಮಾಣದ ಮದ್ಯ ಹಾಗೂ ಕಾರನ್ನು ವಶಪಡಿಸಿಕೊಂಡಿದೆ.

​ದಿನಾಂಕ 22/08/2026 ರಂದು ಮಂಗಳೂರು ವಿಭಾಗದ ಅಬಕಾರಿ ಜಂಟಿ ಆಯುಕ್ತರಾದ ಬಾಲಕೃಷ್ಣ ಸಿ.ಹೆಚ್. ರವರ ಆದೇಶದ ಮೇರೆಗೆ ಮತ್ತು ದಕ್ಷಿಣ ಕನ್ನಡ ಅಬಕಾರಿ ಉಪ ಆಯುಕ್ತೆ ಶ್ರೀಮತಿ ಬಿಂದುಶ್ರೀ ಅವರ ನಿರ್ದೇಶನದಲ್ಲಿ ಈ ಕಾರ್ಯಾಚರಣೆ ನಡೆಸಲಾಗಿದೆ.

​ಖಚಿತ ಮಾಹಿತಿ ಮೇರೆಗೆ ಕಾರ್ಯಾಚರಣೆಗಿಳಿದ ವಿಶೇಷ ತಂಡವು ಯಾವುದೇ ಪರವಾನಗಿ ಇಲ್ಲದೆ ಗೋವಾದಿಂದ ಅಕ್ರಮವಾಗಿ ಸಾಗಿಸುತ್ತಿದ್ದ 438 ಲೀಟರ್ ಗೋವಾ ಮದ್ಯವನ್ನು ಹಾಗೂ ಕೃತ್ಯಕ್ಕೆ ಬಳಸಿದ ಸ್ವಿಫ್ಟ್ ಡಿಸೈರ್ ಕಾರನ್ನು ವಶಕ್ಕೆ ಪಡೆದಿದೆ. ಈ ಸಂಬಂಧ ವಾಹನ ಮಾಲೀಕ ಹಾಗೂ ಚಾಲಕರಾದ ಬಸವರಾಜು ಬೋವಿ ಮತ್ತು ನಾಗವೇಣಿ ನಾಯಕ್ ಅವರನ್ನು ವಶಕ್ಕೆ ಪಡೆದು ತೀವ್ರ ವಿಚಾರಣೆ ನಡೆಸಲಾಗುತ್ತಿದೆ.

ಈ ಕಾರ್ಯಾಚರಣೆಯಲ್ಲಿ ಮಂಗಳೂರು ಉಪವಿಭಾಗದ ಉಪ ಅಧೀಕ್ಷಕಿ ಗಾಯತ್ರಿ ಸಿ.ಹೆಚ್., ಬಂಟ್ವಾಳ ಉಪವಿಭಾಗದ ಉಪ ಅಧೀಕ್ಷಕ ಸಂತೋಷ್ ಮೋಡಗಿ, ಬಂಟ್ವಾಳ ತಾಲೂಕು ವಲಯ ಅಬಕಾರಿ ನಿರೀಕ್ಷಕ ಲಕ್ಷ್ಮಣ್ ಶಿವಣಗಿ, ತಲಪಾಡಿ ಚೆಕ್ ಪೋಸ್ಟ್ ನಿರೀಕ್ಷಕ ದತ್ತಗುರು ಅಥೆಣಿ, ಉಪ ನಿರೀಕ್ಷಕರಾದ ಜಯಪ್ಪ, ಶಿವಶಂಕರ್, ಅಭಿಷೇಕ್ ಹಾಗೂ ಪೇದೆ ಪ್ರಕಾಶ್ ಪಾಲ್ಗೊಂಡಿದ್ದರು. ಜಂಟಿ ಆಯುಕ್ತರ ಕಚೇರಿಯ ನಿರೀಕ್ಷಕಿ ಸುನಿತಾ ಅವರು ಪ್ರಕರಣ ದಾಖಲಿಸಿ ಮುಂದಿನ ತನಿಖೆ ಕೈಗೊಂಡಿದ್ದಾರೆ.

Category
ಕರಾವಳಿ ತರಂಗಿಣಿ