ಬೆಳ್ಳಾರೆ: ಪೊಲೀಸ್ ಠಾಣಾ ವ್ಯಾಪ್ತಿಯ ಪೆರುವಾಜೆ ಗ್ರಾಮದ ಮುಕ್ಕೂರು ಎಂಬಲ್ಲಿ ಸೆಪ್ಟೆಂಬರ್ 06ರ ಮಧ್ಯಾಹ್ನ ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ಗಣೇಶ (38) ಎಂಬಾತ ತನ್ನ ಪತ್ನಿ ವಿನಿತಾ (32) ಹಾಗೂ ಅತ್ತೆ ಕುಸುಮಾ (50) ಅವರ ಮೇಲೆ ಹರಿತವಾದ ಸಾಧನದಿಂದ ಹಲ್ಲೆ ನಡೆಸಿ ರಕ್ತಗಾಯಗೊಳಿಸಿದ್ದಾನೆ. ಗಂಭೀರವಾಗಿ ಗಾಯಗೊಂಡ ವಿನಿತಾ ಮತ್ತು ಕುಸುಮಾ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಶಸ್ತ್ರಚಿಕಿತ್ಸೆಗೆ ಒಳಪಡಿಸಲಾಗಿದೆ ಮತ್ತು ಪ್ರಸ್ತುತ ಚಿಕಿತ್ಸೆಗೆ ಸ್ಪಂದಿಸುತ್ತಿದ್ದಾರೆ.
ಕೃತ್ಯದ ಬಳಿಕ ಆರೋಪಿ ಗಣೇಶ ತಾನೂ ಕೂಡ ಇಲಿಪಾಷಾಣ ಸೇವಿಸಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ. ಈ ಘಟನೆಗೆ ಸಂಬಂಧಿಸಿದಂತೆ ಬೆಳ್ಳಾರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಮುಂದುವರಿಸಿದ್ದಾರೆ.