ಬಂಟ್ವಾಳ: ಹಳೆಯ ವೈಷಮ್ಯದ ಹಿನ್ನೆಲೆಯಲ್ಲಿ ತಂಡವೊಂದು ಮಾರಕಾಸ್ತ್ರಗಳಿಂದ ದಾಳಿ ಮಾಡಿದ ಪರಿಣಾಮ ಇಬ್ಬರು ಯುವಕರು ಗಂಭೀರ ಗಾಯಗೊಂಡ ಘಟನೆ ಬಂಟ್ವಾಳದ ಪುದು ಗ್ರಾಮದ ಅಮ್ಮೆಮಾರ್ ಎಂಬಲ್ಲಿ ನಡೆದಿದೆ.ಹಲ್ಲೆಗೊಳಗಾದ ತಸ್ಲೀಮ್ ಹಾಗೂ ಮಹಮ್ಮದ್ ಶಾಕೀರ್ ಮಂಗಳೂರಿನ ಖಾಸಗಿ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಸ್ಥಳೀಯ ನಿವಾಸಿಗಳಾದ ಮನ್ಸೂರ್, ಪಲ್ಟಿ ಇಮ್ರಾನ್, ಮುಸ್ತಾಕ ಯಾನೆ ಮಿಚ್ಚ, ಸರ್ಪುದ್ದೀನ್, ಅಶ್ರಫ್, ರಿಜ್ವಾನ್, ಸಫ್ವಾನ್, ಅದ್ನಾನ್, ನಿಸಾಕ್, ಯಾಸೀರ್, ಸುಹೈಲ್, ಜಾಹೀದ್, ಸಾದಿಕ್, ಲತೀಫ್ ಎಂಬವರ ತಂಡ ದಾಳಿ ನಡೆಸಿದ್ದು, ಅಮ್ಮೆಮಾರ್ ನಿವಾಸಿ ತಸ್ಲೀಮ್, ಮಹಮ್ಮದ್ ಶಾಕೀರ್, ನಾಸೀರ್, ಸಿಯಾಬು, ಸೈಫುದ್ದೀನ್ ಅವರು ಮಾತನಾಡುತ್ತಿದ್ದ ವೇಳೆ ತಸ್ಲೀಮ್ ಗೆ ಕರೆಯೊಂದು ಬಂದಿದ್ದು, ಈ ವೇಳೆ ಆರೋಪಿಯು ಅವಾಚ್ಯ ಶಬ್ದಗಳಿಂದ ಬೈದು ನಾಲ್ಕು ಮಾರ್ಗಕ್ಕೆ ಬರುವಂತೆ ಸವಾಲು ಹಾಕಿದ್ದಾನೆ. ಈ ವೇಳೆ ಅವರು ಅಮ್ಮೆಮಾರ್ ಶಾಲಾ ಬಳಿಗೆ ಹೋದಾಗ, ಆರೋಪಿ ಮನ್ಸೂರ್ ಹಾಗೂ ತಂಡ ಅಲ್ಲಿದ್ದು ಇದ್ದು, ಈ ವೇಳೆ ಪಲ್ಟಿ ಇಮ್ರಾನ್ ತಲವಾರಿನಿಂದ ತಸ್ಲೀಮ್ ನ ಬಲಕಾಲು, ಮತ್ತೋರ್ವ ಆರೋಪಿ ಮುಸ್ತಾಕ ನು ಬಲಗೈಗೆ ಮಾರಕಾಸ್ತ್ರದಿಂದ ಕಡಿದಿದ್ದು, ಸರ್ಫುದ್ದೀನ್ ಕಲ್ಲಿನಿಂದ ಹೊಡೆದಿದ್ದಾನೆ. ಈ ವೇಳೆ ತಸ್ಲೀಮ್ ನೆಲಕ್ಕೆ ಬಿದ್ದಾಗ, ಮನ್ಸೂರ್ ಮುಖಕ್ಕೆ ಕಡಿದಿದ್ದು, ಜೊತೆಗೆ ಆರೋಪಿಗಳು ಮಹಮ್ಮದ್ ಶಾಕೀರ್ ಗೂ ಅದೇ ರೀತಿ ತಲವಾರಿನಿಂದ ಕಡಿದಿದ್ದಾರೆ. ಜೊತೆಗೆ ಆಶ್ರಫ್, ರಿಜ್ವಾನ್ ಮತ್ತು ಲತೀಫ್ ಮರದ ದೊಣ್ಣೆಯಿಂದ ಹೊಡೆದಿದ್ದಾರೆ. ಘಟನೆಯಲ್ಲಿ ಗಂಭೀರವಾಗಿ ಗಾಯಗೊಂಡಿರುವ ಇಬ್ಬರು ಮಂಗಳೂರು ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದು, ತಸ್ಲೀಮ್ ತೀವ್ರ ನಿಗಾ ಘಟಕ ದಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಬಂಟ್ವಾಳ ಗ್ರಾಮಾಂತರ ಠಾಣೆಯಲ್ಲಿ ಅ.ಕ್ರ. 91/2024, ಕಲಂ:189[2], 191[2] 191[3],352, 115[2], 118[1], 118[2], 109 ಜೊತೆಗೆ 190 BNS ರಂತೆ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ ಎಂದು ಪೊಲೀಸ್ ಮೂಲಗಳು ತಿಳಿಸಿದೆ