image image
ಬ್ರೇಕಿಂಗ್ ನ್ಯೂಸ್
ಬ್ರೇಕಿಂಗ್ ನ್ಯೂಸ್

20 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಕಳ್ಳತನದ ಆರೋಪಿ ಕಾಸರಗೋಡಿನಲ್ಲಿ ಬಂಧನ

20 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಕಳ್ಳತನದ ಆರೋಪಿ ಕಾಸರಗೋಡಿನಲ್ಲಿ ಬಂಧನ

ಮಂಗಳೂರು: 20 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಬಂಧಿಸುವಲ್ಲಿ ಬಂಟ್ವಾಳ ಪೊಲೀಸರು ಯಶಸ್ವಿಯಾಗಿದ್ದಾರೆ. ಬಂಟ್ವಾಳ ತಾಲ್ಲೂಕಿನ ಬಡಗಬೆಳ್ಳೂರು ಗ್ರಾಮದ ಶ್ರೀ ಆದಿಶಕ್ತಿ ಚಾಮುಂಡೇಶ್ವರಿ ದೇವಸ್ಥಾನದಲ್ಲಿ 2004ರ ನ. 07ರಂದು ನಡೆದ ಕಳ್ಳತನ ಪ್ರಕರಣದ ಆರೋಪಿ ಶರೀಫ್ ಸುಮಾರು 20 ವರ್ಷಗಳಿಂದ ತಲೆಮರೆಸಿಕೊಂಡಿದ್ದು, ಕರ್ನಾಟಕ ಮತ್ತು ಕೇರಳ ರಾಜ್ಯದ ಹಲವಾರು ಜಾಗದಲ್ಲಿ ವಿಳಾಸ ಬದಲಾವಣೆ ಮಾಡಿಕೊಂಡು ತಲೆಮರೆಸಿಕೊಂಡಿದ್ದ ಎಂದು ಹೇಳಲಾಗಿತ್ತು.

ಅರೋಪಿಯನ್ನು  ಕೇರಳದ ಕಾಸರಗೋಡಿನಲ್ಲಿ ವಶಕ್ಕೆ ಪಡೆಯಲಾಗಿ, ಆರೋಪಿಗೆ ನ್ಯಾಯಾಂಗ ಬಂಧನ ವಿಧಿಸಿಸಲಾಗಿದೆ.

ಕಾರ್ಯಾಚರಣೆಯಲ್ಲಿ ಬಂಟ್ವಾಳ ಪೊಲೀಸ್ ಉಪಾಧೀಕ್ಷಕ ವಿಜಯಪ್ರಸಾದ್‌ ಅವರ ಮಾರ್ಗದರ್ಶನದಲ್ಲಿ ಬಂಟ ಅವರ ನೇತೃತ್ವದ, ಪಿಎಸ್‌ಐಗಳಾದ ಹರೀಶ್ ಎಂ ಆರೋ ಮೂರ್ತಿ, ಸಿಬ್ಬಂದಿಗಳಾದ ಹರಿಶ್ಚಂದ್ರ, ಗಣೇಶ ಅವರ ತಂಡ ಕಾರ್ಯಚರಣೆ ನಡೆಸಿದೆ ಎಂದು ಪೊಲೀಸ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Category
ಕರಾವಳಿ ತರಂಗಿಣಿ