image image
ಬ್ರೇಕಿಂಗ್ ನ್ಯೂಸ್
ಬ್ರೇಕಿಂಗ್ ನ್ಯೂಸ್

ಹೆಂಡತಿ ಮತ್ತು ಪುಟ್ಟ ಮಗುವನ್ನು ಹತ್ಯೆ ಮಾಡಿ ಆತ್ಮಹತ್ಯೆ ಮಾಡಿಕೊಂಡ ಯುವಕ

ಹೆಂಡತಿ ಮತ್ತು ಪುಟ್ಟ ಮಗುವನ್ನು ಹತ್ಯೆ ಮಾಡಿ ಆತ್ಮಹತ್ಯೆ ಮಾಡಿಕೊಂಡ ಯುವಕ

ಮಂಗಳೂರು: ಪತ್ನಿ ಹಾಗೂ ಮಗುವನ್ನು ಹತ್ಯೆ ಮಾಡಿದ ಯುವಕನೊಬ್ಬ ತಾನೂ ರೈಲಿಗೆ ತಲೆಕೊಟ್ಟು ಆತ್ಮಹತ್ಯೆಗೈದಿರಬಹುದು ಎನ್ನಲಾದ ಘಟನೆ ಮಂಗಳೂರು ನಗರ ಹೊರವಲಯದ ಮುಲ್ಕಿ ಸಮೀಪದ ಪಕ್ಷಿಕೆರೆಯಲ್ಲಿ ನಡೆದಿದೆ.

ಪಕ್ಷಿಕೆರೆಯ ಜಲಜಾಕ್ಷಿ ರೆಸಿಡೆನ್ಸಿ ನಿವಾಸಿ ಕಾರ್ತಿಕ್ ಭಟ್(32) ಆತ್ಮಹತ್ಯೆ ಮಾಡಿಕೊಂಡವರು. ಅವರ ಪತ್ನಿ ಪ್ರಿಯಾಂಕಾ(28) ಹಾಗೂ ಹೃದಯ್(4) ಹತ್ಯೆಯಾದ ದುರ್ದೈವಿಗಳು.  

ಆರೋಪಿ ಕಾರ್ತಿಕ್ ಪಕ್ಷಿಕೆರೆಯಲ್ಲಿನ ತನ್ನ ಮನೆಯಲ್ಲಿ ಪತ್ನಿ ಮತ್ತು ಮಗುವನ್ನು ಹತ್ಯೆಗೈದು ರೈಲಿಗೆ ತಲೆಕೊಟ್ಟು ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂದು ಶಂಕಿಸಲಾಗಿದೆ. ಶುಕ್ರವಾರ ಮಧ್ಯಾಹ್ನ ಯುವಕನೊಬ್ಬ ಮುಲ್ಕಿಯ ಬೆಳಾಯರುನಲ್ಲಿ ರೈಲಿನಡಿಗೆ ತಲೆಕೊಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದ. ಪೊಲೀಸರು ಈ ಬಗ್ಗೆ ಪರಿಶೀಲನೆ ನಡೆಸಿದಾಗ ಆತ್ಮಹತ್ಯೆ ಮಾಡಿಕೊಂಡವರು ಪಕ್ಷಿಕೆರೆಯ ಕಾರ್ತಿಕ್ ಭಟ್ ಎಂದು ತಿಳಿದಿತ್ತು.‌ ಮನೆಗೆ ಬಂದು ನೋಡಿದಾಗ ಅವರ ಪತ್ನಿ - ಮಗು ಹತ್ಯೆಯಾದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ಸ್ಥಳಕ್ಕೆ ಮಂಗಳೂರು ಎಸಿಪಿ ಶ್ರೀಕಾಂತ್, ಮುಲ್ಕಿ ಪೊಲೀಸ್‌ ಇನ್ಸ್‌ಪೆಕ್ಟ‌ರ್ ವಿದ್ಯಾಧರ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು ತನಿಖೆ ನಡೆಸುತ್ತಿದ್ದಾರೆ.

Category
ಕರಾವಳಿ ತರಂಗಿಣಿ