image image
ಬ್ರೇಕಿಂಗ್ ನ್ಯೂಸ್
ಬ್ರೇಕಿಂಗ್ ನ್ಯೂಸ್

ಸೋಮೇಶ್ವರ ರುದ್ರಪಾದೆಯಿಂದ ಸಮುದ್ರಕ್ಕೆ ಹಾರಿ ಆತ್ಮಹತ್ಯೆಗೆ ಯತ್ನಿಸಿದ ವಿಧ್ಯಾರ್ಥಿನಿ: ಕಾಪಾಡಲು ನೀರಿಗೆ ಹಾರಿದ ಯುವಕನೂ ಆಪಾಯಕ್ಕೆ ...

ಸೋಮೇಶ್ವರ ರುದ್ರಪಾದೆಯಿಂದ ಸಮುದ್ರಕ್ಕೆ ಹಾರಿ ಆತ್ಮಹತ್ಯೆಗೆ ಯತ್ನಿಸಿದ ವಿಧ್ಯಾರ್ಥಿನಿ: ಕಾಪಾಡಲು ನೀರಿಗೆ ಹಾರಿದ ಯುವಕನೂ ಆಪಾಯಕ್ಕೆ ...

ಮಂಗಳೂರು: ಉಳ್ಳಾಲ ಸೋಮೇಶ್ವರ ಬೀಚ್ ನ ಬಂಡೆಯಿಂದ ಸಮುದ್ರಕ್ಕೆ ಹಾರಿ ಆತ್ಮಹತ್ಯೆಗೆ ಯತ್ನಿಸಿದ ವಿಧ್ಯಾರ್ಥಿನಿಯನ್ನು ಕಾಪಾಡಲು ನೀರಿಗೆ ಹಾರಿದ ಯುವಕನೂ ಆಪಾಯಕ್ಕೆ ಸಿಲುಕಿದ ಘಟನೆ ನಡೆದಿದೆ.

ಕೋಟೆಕಾರು ಮಾಡೂರಿನ ಬಾಡಿಗೆ ಮನೆಯಲ್ಲಿ ವಾಸವಿರುವ ಪದವಿ ವಿಧ್ಯಾರ್ಥಿನಿ ಸಮುದ್ರಕ್ಕೆ ಹಾರಿ ಆತ್ಮಹತ್ಯೆ ಯತ್ನಿಸಿದ್ದಾಳೆ. ಈ ವೇಳೆ ರುದ್ರಪಾದೆಯಲ್ಲಿದ್ದ ಹೊರ ರಾಜ್ಯದ ವಲಸೆ ಕಾರ್ಮಿಕನೋರ್ವ ತಕ್ಷಣವೇ ನೀರಿಗೆ ಜಿಗಿದು ಯುವತಿಯನ್ನ ರಕ್ಷಸಿ ದಡದತ್ತ ಸೆಳೆಯಲು ಮುಂದಾಗಿದ್ದಾನೆ. ಆದರೆ ಯುವತಿ ಪ್ರಾಣ ಸಂಕಟದಿಂದ ವಲಸೆ ಕಾರ್ಮಿಕನನ್ನು ಗಟ್ಟಿಯಾಗಿ ಬಿಗಿದಪ್ಪಿದ್ದು, ಇಬ್ಬರೂ ನೀರುಪಾಲಾಗುವ ಅಪಾಯಕ್ಕೀಡಾಗಿದ್ದರು.

ಕೂಡಲೇ ಸ್ಥಳದಲ್ಲಿದ್ದ ಕರಾವಳಿ ಕಾವಲು ಪಡೆಯ ಜೀವರಕ್ಷಕ ಸಿಬ್ಬಂದಿ ಸುಜಿತ್ ಟಯರ್ ಟ್ಯೂಬ್ ಮೂಲಕ ಯುವತಿ ಮತ್ತು ವಲಸೆ ಕಾರ್ಮಿಕನನ್ನ ದಡಕ್ಕೆ ಎಳೆದು ರಕ್ಷಸಿದ್ದಾರೆ. ಯುವತಿ ಪ್ರಾಣಾಪಾಯದಿಂದ ಪಾರಾಗಿದ್ದು, ಮಂಗಳೂರಿನ ವೆನ್ಹಾಕ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾಳೆ ಎಂದು ತಿಳಿದುಬಂದಿದೆ.

Category
ಕರಾವಳಿ ತರಂಗಿಣಿ