image image
ಬ್ರೇಕಿಂಗ್ ನ್ಯೂಸ್
ಬ್ರೇಕಿಂಗ್ ನ್ಯೂಸ್

ಉತ್ತರ ಪ್ರದೇಶದ ಸಂಭಾಲ್​ನ ಮಸೀದಿ ಸರ್ವೇ ವಿರೋಧಿಸಿ ಪ್ರತಿಭಟನೆ ಹಿಂಸಾಚಾರಕ್ಕೆ: ಇಂಟರ್​ನೆಟ್​ ಸ್ಥಗಿತ, ನಗರಕ್ಕೆ ಹೊರಗಿನವರ ಪ್ರವೇಶಕ್ಕೆ ನಿರ್ಬಂಧ

ಉತ್ತರ ಪ್ರದೇಶದ ಸಂಭಾಲ್​ನ ಮಸೀದಿ ಸರ್ವೇ ವಿರೋಧಿಸಿ ಪ್ರತಿಭಟನೆ ಹಿಂಸಾಚಾರಕ್ಕೆ: ಇಂಟರ್​ನೆಟ್​ ಸ್ಥಗಿತ, ನಗರಕ್ಕೆ ಹೊರಗಿನವರ ಪ್ರವೇಶಕ್ಕೆ ನಿರ್ಬಂಧ

ಲಕ್ನೋ: ಉತ್ತರ ಪ್ರದೇಶದ ಸಂಭಾಲ್​ನಲ್ಲಿರುವ ಮಸೀದಿ ಕಟ್ಟಡದ ಸರ್ವೇ ವಿರೋಧಿಸಿ ನಡೆಸುತ್ತಿದ್ದ ಪ್ರತಿಭಟನೆ ಹಿಂಸಾಚಾರಕ್ಕೆ ತಿರುಗಿದ ಹಿನ್ನೆಲೆಯಲ್ಲಿ ಇಂಟರ್​ನೆಟ್​ ಸ್ಥಗಿತ ಸೇರಿದಂತೆ ನಗರಕ್ಕೆ ಹೊರಗಿನವರ ಪ್ರವೇಶಕ್ಕೆ ನಿರ್ಬಂಧ ವಿಧಿಸಲಾಗಿದ್ದು, ನವೆಂಬರ್​ 30ರವರೆಗೂ ಈ ಆದೇಶ ಜಾರಿಯಲ್ಲಿರಲಿದೆ. ಭಾರತೀಯ ನ್ಯಾಯ ಸಂಹಿತೆ (ಬಿಎನ್​ಎಸ್​) ಅಡಿಯಲ್ಲಿ ಜಿಲ್ಲಾ ಮ್ಯಾಜಿಸ್ಟ್ರೇಟ್​ ರಾಜೇಂದರ್​ ಪೆನ್ಸಿಯಾ ಕಟ್ಟುನಿಟ್ಟಿನ ಆದೇಶ ಹೊರಡಿಸಿದ್ದಾರೆ.

ಅಧಿಕಾರಿಗಳ ಅನುಮತಿಯಿಲ್ಲದೇ ಯಾರೂ ಕೂಡಾ ಒಜಿಲ್ಲೆಯ ಗಡಿ ದಾಟಿ ಪ್ರವೇಶ ಮಾಡುವಂತಿಲ್ಲ. ಈ ಆದೇಶ ತಕ್ಷಣದಿಂದಲೇ ಜಾರಿಗೆ ಬರಲಿದೆ. ಆದೇಶ ಉಲ್ಲಂಘನೆ ಬಿಎನ್​ಎಸ್​ ಸೆಕ್ಷನ್​ 223ರ ಅಡಿಯಲ್ಲಿ ಶಿಕ್ಷಾರ್ಹ ಅಪರಾಧ ಎಂದು ಎಚ್ಚರಿಸಲಾಗಿದೆ. ಹಿಂಸಾಚಾರ ಭುಗಿಲೆದ್ದ ಬೆನ್ನಲ್ಲೇ ಪೊಲೀಸರು 21 ಮಂದಿಯನ್ನು ಬಂಧಿಸಿದ್ದಾರೆ. ಹಲವರ ಮನೆಯಲ್ಲಿ ಶಸ್ತ್ರಾಸ್ತ್ರಗಳು ಪತ್ತೆಯಾಗಿದ್ದು, ವಶಕ್ಕೆ ಪಡೆಯಲಾಗಿದೆ. ಬಂಧಿತರಲ್ಲಿ ಇಬ್ಬರು ಮಹಿಳೆಯರಿದ್ದು, ಸಿಸಿಟಿವಿ ಕ್ಯಾಮೆರಾ ಮೂಲಕ ದುಷ್ಕರ್ಮಿಗಳ ಪತ್ತೆಗೆ ಪೊಲೀಸರು ಮುಂದಾಗಿದ್ದಾರೆ.

ಮೊಘಲ್ ಕಾಲದ ಇಲ್ಲಿನ ಮಸೀದಿ ಇದ್ದ ಜಾಗದಲ್ಲಿ ಹಿಂದೂ ದೇವಾಲಯವಿತ್ತು. ದೇವಾಲಯ ಕೆಡವಿ ಮಸೀದಿ ನಿರ್ಮಿಸಲಾಗಿದೆ ಎಂದು ಹಿಂದೂ ಅರ್ಜಿದಾರರೊಬ್ಬರು ಕೋರ್ಟ್​ಗೆ ಮನವಿ ಸಲ್ಲಿಸಿದ್ದರು. ಈ ಅರ್ಜಿ ವಿಚಾರಣೆ ನಡೆಸಿದ್ದ ಕೋರ್ಟ್, ಮಸೀದಿ ಸರ್ವೇಗೆ ನ.19ರಂದು ಆದೇಶಿಸಿತ್ತು. ಕೋರ್ಟ್ ಆದೇಶದ ಹಿನ್ನೆಲೆಯಲ್ಲಿ ಅಧಿಕಾರಿಗಳು ಸರ್ವೇಗೆ ತೆರಳಿದ್ದಾಗ ಕೆಲವು ಕಿಡಿಗೇಡಿಗಳು ಕಲ್ಲು ತೂರಾಟ ನಡೆಸಿದ್ದರಿಂದ ಹಿಂಸಾಚಾರ ಉಂಟಾಗಿದೆ.

ಪೊಲೀಸರು ಮಸೀದಿ ಪ್ರವೇಶಿಸದಂತೆ ಅನೇಕರು ತಡೆದಿದ್ದಾರೆ. ಈ ವೇಳೆ ಪೊಲೀಸ್​ ಸಿಬ್ಬಂದಿ ಮೇಲೆ ಕಲ್ಲು ತೂರಾಟ ನಡೆಸಲಾಗಿದೆ. ಘಟನೆಯಲ್ಲಿ ಹಲವು ಪೊಲೀಸರು ಗಾಯಗೊಂಡಿದ್ದಾರೆ. ಸ್ಥಳದಲ್ಲಿದ್ದ 10 ಪೊಲೀಸ್​ ವಾಹನಗಳಿಗೆ ಬೆಂಕಿ ಹಚ್ಚಲಾಗಿದೆ.

Category
ಕರಾವಳಿ ತರಂಗಿಣಿ