ಕಾರ್ಕಳ: ಈಜಲು ಹೋಗಿದ್ದ ವಿದ್ಯಾರ್ಥಿ ನೀರು ಪಾಲಾದ ಘಟನೆ ಉಡುಪಿ ಜಿಲ್ಲೆಯ ಕಾರ್ಕಳ ತಾಲೂಕಿನ ದುರ್ಗಾ ಫಾಲ್ಸ್ ನಲ್ಲಿ ಸಂಭವಿಸಿದೆ. ಗ್ಲಾಸನ್ ಜೋಯ್ ಡಾಯಾಸ್ (20) ನೀರು ಪಾಲಾದ ವಿದ್ಯಾರ್ಥಿ.
ಈತ ಉಡುಪಿಯ ಮಿಲಾಗ್ರಿಸ್ ಕಾಲೇಜಿನ ವಿದ್ಯಾರ್ಥಿಯಾಗಿದ್ದು, ಸ್ನೇಹಿತರ ಜೊತೆ ಫಾಲ್ಸ್ ಗೆ ಈಜಲು ಹೋಗಿದ್ದ. ಫಾಲ್ ನಲ್ಲಿ ಈಜಾಡುತ್ತಿದ್ದ ವೇಳೆ ಬೊಂಬೆತಡ್ಕ ಪಾಪುದ ಗುಂಡಿಯಲ್ಲಿ ಆಯತಪ್ಪಿ ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದಾನೆ. ಜೊತೆಗಿದ್ದ ಸ್ನೇಹಿತರಿಗೆ ಯಾವುದೇ ಅಪಾಯ ಸಂಭವಿಸಿಲ್ಲ ಎಂದು ತಿಳಿಸುಬಂದಿದೆ.
ಈ ಕುರಿತು ಕಾರ್ಕಳ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.