ಮಂಗಳೂರು: ಇಂದು ಸಂಜೆ 7.30 ರ ಸುಮಾರಿಗೆ ಕಂಕನಾಡಿ ಠಾಣಾ ವ್ಯಾಪ್ತಿಯ ಅಳಪೆ ಎಂಬಲ್ಲಿ ಮಂಗಳೂರಿನಿಂದ ಬೆಂಗಳೂರಿಗೆ ಪ್ರಯಾಣಿಕರನ್ನು ಕೊಂಡೊಯ್ಯುತ್ತಿದ್ದ KSRTC ಬಸ್ಸು ಚಾಲಕರಾದ ಅರುಣ್ ಎಂಬುವವರು ಬಸ್ಸಿಗೆ ಅಡ್ಡ ಬಂದ ಸ್ಕೂಟರ್ ಸವಾರ ನನ್ನು ಪ್ರಶ್ನಿಸಿದ್ದಕ್ಕೆ ಕೋಪಗೊಂಡ ಸ್ಕೂಟರ್ ಸವಾರನು ಬಸ್ಸನ್ನು ಅಡ್ಡಗಟ್ಟಿ ಹೆಲ್ಮೆಟ್ ನಿಂದ ಬಸ್ಸಿನ ಮುಂಭಾಗದ ಗಾಜನ್ನು ಒಡೆದು ಪರಾರಿಯಾಗಿದ್ದಾನೆ.
ತಕ್ಷಣ ಸ್ಥಳಕ್ಕೆ ಭೇಟಿ ನೀಡಿದ ಕಂಕನಾಡಿ ಪೊಲೀಸರು ಬಸ್ಸುಚಾಲಕ ರನ್ನು ವಿಚಾರಿಸಿ, ಪ್ರಯಾಣಿಕರಿಗೆ ಬದಲಿ ವ್ಯವಸ್ಥೆ ಮಾಡಿದ್ದಾರೆ.
ಬಸ್ಸು ಚಾಲಕ ಅರುಣ್ ರವರ ದೂರಿನಂತೆ ಸರ್ಕಾರಿ ನೌಕರನ ಕರ್ತವ್ಯಕ್ಕೆ ಅಡ್ಡಿ ಮತ್ತು ಸಾರ್ವಜನಿಕ ಆಸ್ತಿ ಹಾನಿ ಪ್ರಕರಣವನ್ನು ದಾಖಲಿಸಿ ತನಿಖೆ ನಡೆಸಲಾಗುತ್ತಿದ್ದು,
ಆರೋಪಿತನ ಬಗ್ಗೆ ಮಾಹಿತಿ ತಿಳಿದು ಬಂದಿದ್ದು ಪತ್ತೆ ಕಾರ್ಯ ನಡೆಸಲಾಗುತ್ತಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.