image image
ಬ್ರೇಕಿಂಗ್ ನ್ಯೂಸ್
ಬ್ರೇಕಿಂಗ್ ನ್ಯೂಸ್

ರಾಮೇಶ್ವರಂ ಕೆಫೆ ಬಾಂಬ್‌ ಬ್ಲಾಸ್ಟ್‌ ಮಾದರಿ ಮಂಗಳೂರು ವಿಮಾನ ನಿಲ್ದಾಣಕ್ಕೂ ಬಾಂಬ್‌ ಬ್ಲಾಸ್ಟ್‌ ಮಾಡುವುದಾಗಿ ಬೆದರಿಕೆ ಕರೆ ಸಂದೇಶ: ಪ್ರಕರಣ ದಾಖಲು

ರಾಮೇಶ್ವರಂ ಕೆಫೆ ಬಾಂಬ್‌ ಬ್ಲಾಸ್ಟ್‌ ಮಾದರಿ ಮಂಗಳೂರು ವಿಮಾನ ನಿಲ್ದಾಣಕ್ಕೂ ಬಾಂಬ್‌ ಬ್ಲಾಸ್ಟ್‌ ಮಾಡುವುದಾಗಿ ಬೆದರಿಕೆ ಕರೆ ಸಂದೇಶ: ಪ್ರಕರಣ ದಾಖಲು

ಮಂಗಳೂರು : ಕಳೆದ ಮಾರ್ಚ್‌ 1 ರಂದು ಬೆಂಗಳೂರಿನ ರಾಮೇಶ್ವರಂ ಕೆಫೆಯಲ್ಲಿ ಬಾಂಬ್‌ ಬ್ಲಾಸ್ಟ್‌ ಪ್ರಕರಣದ ಮಾದರಿ ಇದೀಗ ಮಂಗಳೂರಿನ ವಿಮಾನ ನಿಲ್ದಾಣಕ್ಕೂ  ಬಾಂಬ್‌ ಬ್ಲಾಸ್ಟ್‌ ಮಾಡುವುದಾಗಿ ಬೆದರಿಕೆ ಕರೆ ಸಂದೇಶವೊಂದು ಬಂದಿದೆ.

ಹೌದು ತಮಿಳುನಾಡಿನಲ್ಲಿ ಬಂಧನಕ್ಕೀಡಾಗಿರುವ ಡ್ರಗ್‌ ಕಿಂಗ್‌ ಪಿನ್‌ ಎನ್ನಲಾದ ಜಾಫರ್‌ ಸಾದಿಕ್‌ ಮತ್ತು ಡಿಸಿಎಂ ಉದಯವಿಧಿ ಸ್ಟಾಲಿನ್‌ ಅವರ ಪತ್ನಿ, ಚಿತ್ರ ನಿರ್ಮಾಪಕಿ ಕೃತಿಗಾ ಉದಯನಿಧಿ ಅವರ ಮೇಲಿರುವ ಕೇಸನ್ನು ವಾಪಸ್‌ ಪಡೆಯಬೇಕು. ತಿರುಚ್ಚಿ ಸೆಂಟ್ರಲ್‌ ಜೈಲಿನಲ್ಲಿರುವ ಟಿಎನ್‌ಎಲ್‌ಎ ಉಗ್ರ ಸಂಘಟನೆಯ ಮುಖ್ಯಸ್ಥ ಎಸ್‌. ಮಾರನ್‌ ಅವರನ್ನು ಬಿಡುಗಡೆ ಮಾಡಬೇಕು ಎಂಬ ಬೇಡಿಕೆ ಮುಂದಿಡಲಾಗಿದ್ದು, ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬೆದರಿಕೆ ಸಂದೇಶ ಬಂದ ಬಗ್ಗೆ ತಡವಾಗಿ ವರದಿಯಾಗಿದೆ. ನ.30ರಂದು ಬೆಳಗ್ಗೆ 10 ಗಂಟೆ ಸುಮಾರಿಗೆ ಅಕ್ರಮ್‌ ವಾಯ್ಕರ್‌ ಎನ್ನುವ ಹೆಸರಲ್ಲಿದ್ದ ಇಮೇಲ್‌ನಿಂದ ಬೆದರಿಕೆ ಸಂದೇಶ ಬಂದಿದೆ. ಈ ಬಗ್ಗೆ ಬಜಪೆ ಠಾಣೆಗೆ ಕೇಂದ್ರೀಯ ಕೃಗಾರಿಕಾ ಭದ್ರತಾ ಪಡೆ ಸಿಬ್ಬಂದಿ ದೂರು ನೀಡಿದ್ದಾರೆ ಎಂದು ಪೊಲೀಸ್ ಮೂಲಗಳಿಂದ ತಿಳಿದಿದೆ.

Category
ಕರಾವಳಿ ತರಂಗಿಣಿ