image image
ಬ್ರೇಕಿಂಗ್ ನ್ಯೂಸ್
ಬ್ರೇಕಿಂಗ್ ನ್ಯೂಸ್

5 ನೇ ತರಗತಿ ವಿದ್ಯಾರ್ಥಿನಿ ಮೇಲೆ ಮುಖ್ಯಶಿಕ್ಷಕನಿಂದ ಪೈಶಾಚಿಕ ಕೃತ್ಯ

5 ನೇ ತರಗತಿ ವಿದ್ಯಾರ್ಥಿನಿ ಮೇಲೆ ಮುಖ್ಯಶಿಕ್ಷಕನಿಂದ ಪೈಶಾಚಿಕ ಕೃತ್ಯ

ಕಲಬುರಗಿ : ರಾಜ್ಯದಲ್ಲಿ ಮತ್ತೊಂದು ಪೈಶಾಚಿಕ ಕೃತ್ಯ ಬೆಳಕಿಗೆ ಬಂದಿದ್ದು, ಮುಖ್ಯಶಿಕ್ಷಕನೇ 5 ನೇ ತರಗತಿ ವಿದ್ಯಾರ್ಥಿನಿ ಮೇಲೆ ಅತ್ಯಾಚಾರ ಎಸಗಿರುವ ಘಟನೆ ಕಲಬುರಗಿಯ ಯಡ್ರಾಮಿ ಪಟ್ಟಣದಲ್ಲಿ ನಡೆದಿದೆ.

ಯಡ್ರಾಮಿ ಪಟ್ಟಣದ ನವೋದಯ ಕಿರಿಯ ಪ್ರಾಥಮಿಕ ಶಾಲೆ ಮುಖ್ಯಶಿಕ್ಷಕ ಹಾಜಿಮಲಂಗ್ ಗಣಿಯಾ‌ರ್ ಬಂಧಿತ ಆರೋಪಿಯಾಗಿದ್ದು, ಶಾಲೆಯ 11 ವರ್ಷದ ಬಾಲಕಿ ಮೇಲೆ ಅತ್ಯಾಚಾರ ಎಸಗಿದ್ದು, ಈ ವಿಷಯ ಮನೆಯಲ್ಲಿ ತಿಳಿಸದಂತೆ ಬೆದರಿಕೆ ಸಹ ಹಾಕಿದ್ದಾನೆ. ಬಾಲಕಿ ಪಕ್ಕದ ಮನೆಯವರ ಮುಂದೆ ಶಾಲೆಯಲ್ಲಿ ನಡೆದ ಘಟನೆ ವಿವರಿಸಿದ್ದಾಳೆ. ಪಕ್ಷದ ಮನೆಯವರು ಕೂಡಲೇ ಬಾಲಕಿಯ ತಂದೆ-ತಾಯಿಗೆ ಮಾಹಿತಿ ನೀಡಿದ್ದಾರೆ.

ಕೂಡಲೇ ಕುಟುಂಬಸ್ಥರು ಯಡ್ರಾಮಿ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದು, ಆರೋಪಿ ಮುಖ್ಯಶಿಕ್ಷಕನನ್ನು ಪೊಲೀಸರು ಬಂಧಿಸಿದ್ದು, ವಿಚಾರಣೆ ನಡೆಸುತ್ತಿದ್ದಾರೆ

Category
ಕರಾವಳಿ ತರಂಗಿಣಿ