ಮಂಗಳೂರು: ಹಣಕಾಸಿನ ವಿಚಾರಕ್ಕೆ ಸಂಬಂಧಿಸಿದಂತೆ ಯುವಕನೊಬ್ಬ ಮಹಿಳೆಯೊಬ್ಬರ ಮನೆಗೆ ಅಕ್ರಮವಾಗಿ ಪ್ರವೇಶಿಸಿ ಮಹಿಳೆ ಮತ್ತು ಆಕೆಯ ಸಹೋದರಿಯ ಜೊತೆ ಅನುಚಿತವಾಗಿ ವರ್ತಿಸಿದ ಬಗ್ಗೆ ಕಂಕನಾಡಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಶಿವಮೊಗ್ಗ ಜಿಲ್ಲೆಯ ಸೈಯದ್ ನಹೀಂ (25) ಎಂಬಾತ ಶುಕ್ರವಾರ ಮಧ್ಯಾಹ್ನ 12:40ಕ್ಕೆ ಕುಲಶೇಖರದ 48ರ ಹರೆಯದ ಮಹಿಳೆಯ ಮನೆಗೆ ಅಕ್ರಮವಾಗಿ ಪ್ರವೇಶಿಸಿ ಮಹಿಳೆ ಮತ್ತಾಕೆಯ ಸಹೋದರಿಯ ಮಗಳ ಜೊತೆ ಅನುಚಿತವಾಗಿ ವರ್ತಿಸಿದ ಎನ್ನಲಾಗಿದೆ. ವೈಯಕ್ತಿಕ ಕೆಲಸದ ನಿಮಿತ್ತ ಮಂಗಳೂರಿಗೆ ಆರೋಪಿ ಬಂದಿದ್ದು, ಈತನಿಗೂ ಮಹಿಳೆಗೂ ಹಣಕಾಸಿನ ವಿಷಯದಲ್ಲಿ ಜಗಳವಾಗಿತ್ತು ಎಂದು ಹೇಳಲಾಗಿದೆ. ಮಹಿಳೆ ನೀಡಿದ ದೂರಿನಂತೆ ಪ್ರಕರಣ ದಾಖಲಿಸಿರುವ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ