image image
ಬ್ರೇಕಿಂಗ್ ನ್ಯೂಸ್
ಬ್ರೇಕಿಂಗ್ ನ್ಯೂಸ್

ಕುಖ್ಯಾತ ಸರಕಳ್ಳರಿಬ್ಬರನ್ನು ಬಂಧಿಸುವಲ್ಲಿ ಮಂಗಳೂರು ಸಿಸಿಬಿ ಪೊಲೀಸರು ಯಶಸ್ವಿ

ಕುಖ್ಯಾತ ಸರಕಳ್ಳರಿಬ್ಬರನ್ನು ಬಂಧಿಸುವಲ್ಲಿ ಮಂಗಳೂರು ಸಿಸಿಬಿ ಪೊಲೀಸರು ಯಶಸ್ವಿ

ಮಂಗಳೂರು: ಮಂಗಳೂರುಕಮೀಷನರೆಟ್ ವ್ಯಾಪ್ತಿ ಹಾಗೂ ಉಡುಪಿ ಜಿಲ್ಲೆಯ ಕಾರ್ಕಳ ಗ್ರಾಮಾಂತರ ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲಿ ಬೈಕ್‌ನಲ್ಲಿ ಬಂದು ಮಹಿಳೆಯರ ಕುತ್ತಿಗೆಯಿಂದ ಚಿನ್ನದ ಸರವನ್ನು ಸುಲಿಗೆ ಮಾಡಿದ ಪ್ರಕರಣದಲ್ಲಿ ಭಾಗಿಯಾದ ಕುಖ್ಯಾತ ಸರಕಳ್ಳರಿಬ್ಬರನ್ನು ಬಂಧಿಸುವಲ್ಲಿ ಮಂಗಳೂರು ಸಿಸಿಬಿ ಪೊಲೀಸರು ಯಶಸ್ವಿಯಾಗಿದ್ದಾರೆ.

ಮೂಲತಃ ಸುರತ್ಕಲ್ ಕೃಷ್ಣಾಪುರ 7ನೇ ಬ್ಲಾಕ್‌ನವನಾಗಿದ್ದು ಪ್ರಸ್ತುತ ತೊಕ್ಕೊಟ್ಟು ಪೆರ್ಮನೂರು ಚೆಂಬುಗುಡ್ಡೆಯಲ್ಲಿ ವಾಸವಿರುವ ಹಬೀಬ್ ಹಸನ್ ಆಲಿಯಾಸ್ ಚೊಂಬುಗುಡ್ಡೆ ಹಬೀಬ್ ಆಲಿಯಾಸ್ ಅಬ್ಬಿ (43) ಮತ್ತು ಬಂಟ್ವಾಳ ಬಿ.ಮೂಡ ಅದ್ದೆಡ್ಡಿ ಹೌಸ್ ನ ಉಮ್ಮರ್ ಶಿಯಾಫ್ (29) ಬಂಧಿತ ಕಳ್ಳರು.

ಡಿ. 6ರಂದು ನರಿಂಗಾನ ಗ್ರಾಮದ ತೌಡುಗೋಳಿ ಅಂಗನವಾಡಿ ಕೇಂದ್ರದಲ್ಲಿ ಸುಜಿನಾ ಡಿ'ಸೋಜಾ ಅವರು ಕೆಲಸದಲ್ಲಿರುವಾಗ ಅಲ್ಲಿಗೆ ಬೈಕಿನಲ್ಲಿ ಬಂದ ಇಬ್ಬರು, ಮಂಜನಾಡಿಗೆ ಹೋಗುವ ದಾರಿಯ ಬಗ್ಗೆ ವಿಚಾರಿಸಿದ್ದು, ದಾರಿಯನ್ನು ಹೇಳಿ ಅಂಗನವಾಡಿಯ ಬಾಗಿಲು ಹಾಕುವಷ್ಟರಲ್ಲಿ ಬಾಗಿಲನ್ನು ದೂಡಿ ಒಳಗೆ ಪ್ರವೇಶಿಸಿದ ಆರೋಪಿಗಳು ಅವರ ಕುತ್ತಿಗೆಯಲ್ಲಿದ್ದ ಚಿನ್ನದ ಸರವನ್ನು ಸುಲಿಗೆ ಮಾಡಿ ಪರಾರಿಯಾಗಿದ್ದರು. ಈ ಬಗ್ಗೆ ಕೊಣಾಜೆ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ಡಿ. 9ರಂದು ಕಾರ್ಕಳ ಗ್ರಾಮಾಂತರ ಠಾಣೆ ವ್ಯಾಪ್ತಿಯ ಬೋಳ ಗ್ರಾಮದ ಸುಂಕಮಾರು- ಮಂಜರಪಲ್ಕೆ ಯಲ್ಲಿ ಮನೆಗೆ ನಡೆದುಕೊಂಡು ಹೋಗುತ್ತಿದ್ದ ವಸಂತಿ ಅವರಲ್ಲಿ ಬೈಕ್‌ನಲ್ಲಿ ಬಂದ ಯುವಕ ಮತ್ತು ಯುವತಿ ಭಾಸ್ಕ‌ರ್ ಅವರ ಮನೆಗೆ ಹೋಗುವ ದಾರಿ ಯಾವುದೆಂದು ಕೇಳಿ ಬೈಕ್‌ ಸವಾರನು ವಸಂತಿಯವರ ಕುತ್ತಿಗೆಯಲ್ಲಿದ್ದ ಚಿನ್ನದ ಸರವನ್ನು ಸುಲಿಗೆ ಮಾಡಿ ಪರಾರಿಯಾಗಿದ್ದು, ಪೊಲೀಸರು ದಾಳಿ ನಡೆಸಿ ಆರೋಪಿಗಳನ್ನು ಬಂಧಿಸಿದ್ದಾರೆ.

ಹಬೀಬ್ ಹಸನ್ ವಶದಿಂದ ಕಾರ್ಕಳದಿಂದ ಸುಲಿಗೆ ಮಾಡಿದ 17.43 ಗ್ರಾಂ ಚಿನ್ನದ ಸರ, ಸರಕಳ್ಳತನ ಮಾಡಲು ಉಪಯೋಗಿಸಿದ ಹೀರೋ ಹೊಂಡಾ ಬೈಕ್‌, ಚೂರಿಯನ್ನು ವಶಪಡಿಸಿಕೊಳ್ಳಲಾಗಿದೆ. ಈತನನ್ನು ದಸ್ತಗಿರಿ ಮಾಡಲು ಪೊಲೀಸರು ಬಂದಾಗ ಅವರಿಗೆ ಹಲ್ಲೆ ನಡೆಸಲು ಈ ಚೂರಿಯನ್ನು ಇಟ್ಟುಕೊಂಡಿದ್ದ.

ಆರೋಪಿಗಳಿಬ್ಬರು 2 ತಿಂಗಳ ಹಿಂದೆ ಮೂಡುಬಿದಿರೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ 2 ಕಡೆ ಮಹಿಳೆಯರ ಕುತ್ತಿಗೆಯಿಂದ ಸರಕಳ್ಳತನ ಮಾಡಿ ಬಂ ಧಿಸಲ್ಪಟ್ಟು ಮಂಗಳೂರು ಕಾರಾಗೃಹದಲ್ಲಿ ನ್ಯಾಯಾಂಗಬಂಧನದಲ್ಲಿದ್ದರು. ಡಿ. 6ರಂದು ಜಾಮೀನಿನಲ್ಲಿ ಬಿಡುಗಡೆಗೊಂಡಿದ್ದು, ಅದೇ ದಿನವೇ ಮಂಗಳೂರು ನಗರದ ಜೈಲ್‌ ರಸ್ತೆಯ ಪರಿಸರದಲ್ಲಿ ಬೈಕ್ ಕಳ್ಳತನ ಮಾಡಿ ಮರುದಿನ ಆರೋಪಿಗಳಿಬ್ಬರು ಕೊಣಾಜೆ ಪೊಲೀಸ್‌ ಠಾಣಾ ವ್ಯಾಪ್ತಿಯ ತೌಡುಗೋಳಿ ಬಳಿ ಮಹಿಳೆಯ ಕುತ್ತಿಗೆಯಿಂದ ಚಿನ್ನದ ಸರವನ್ನು ಸುಲಿಗೆ ಮಾಡಿದ್ದರು. ಅಲ್ಲದೇ 2 ದಿನ ಬಳಿಕ ಮಂಗಳೂರು ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣ ಪರಿಸರದಲ್ಲಿ ನಿಲ್ಲಿಸಿದ್ದ ಇನ್ನೊಂದು ಬೈಕ್ ಅನ್ನು ಕಳವು ಮಾಡಿ ಅದೇ ಬೈಕ್‌ನಲ್ಲಿ ಆರೋಪಿ ಹಬೀಬ್ ಆತನ ಸ್ನೇಹಿತೆ ಮಹಿಳೆಯ ಜತೆಗೂಡಿ ಕಾರ್ಕಳದಲ್ಲಿ ಮಹಿಳೆಯೋರ್ವರ ಕುತ್ತಿಗೆಯಿಂದ ಚಿನ್ನದ ಸರವನ್ನು ಸುಲಿಗೆ ಮಾಡಿದ್ದ. ಆರೋಪಿಗಳ ಪೈಕಿ ಹಬೀಬ್ ಹಸನ್ ವಿರುದ್ಧ ಈ ಹಿಂದೆ ಮಂಗಳೂರು ನಗರದ ಬರ್ಕೆ, ಮೂಡಬಿದ್ರಿ, ಸುರತ್ಕಲ್, ಉಳ್ಳಾಲ, ಕೊಣಾಜೆ, ಬಜೆ, ವಿಟ್ಲ, ಬಂಟ್ವಾಳ ನಗರ, ಕಾರ್ಕಳ ಗ್ರಾಮಾಂತರ ಪೊಲೀಸ್ ಠಾಣೆಗಳಲ್ಲಿ ಒಟ್ಟು 39 ಕಳವು, ಜಾನುವಾರು ಕಳವು, ಸರಕಳ್ಳತನ ಪ್ರಕರಣಗಳು ದಾಖಲಾಗಿದೆ. ಆರೋಪಿ ಉಮ್ಮರ್‌ ಶಿಯಾಫ್ ಈ ಹಿಂದೆ ಬಂಟ್ವಾಳ ನಗರ ಪೊಲೀಸ್ ಠಾಣೆಯಲ್ಲಿ ಕೊಲೆ ಯತ್ನ ಪ.ಕರಣ, ಹಾಗೂ ಮೂಡಬಿದೆ. ಪೊಲೀಸ್ ಠಾಣೆಯಲಿ 2 ಕೇಸು ದಾಖಾಲಾಗಿತ್ತು. 

 ಮಂಗಳೂರು ಸಿಸಿಬಿ ಘಟಕದ ಎಸಿಪಿ ಮನೋಜ್ ಕುಮಾರ್‌ನಾಯ್ಕ ಅವರ ನೇತೃತ್ವದಲ್ಲಿ ನಿರೀಕ್ಷಕರಾದ ಶ್ಯಾಮ್ ಸುಂದರ್ ಎಚ್.ಎಂ., ಪಿಎಸ್‌ಐ ಸುದೀಪ್ ಎಂ.ವಿ., ಎಎಸ್‌ಐ ಯವರಾದ ಮೋಹನ್ ಕೆ.ವಿ., ರಾಮ ಪೂಜಾರಿ, ಸುಜನ್ ಶೆಟ್ಟಿ ಮತ್ತು ಸಿಸಿಬಿ ಸಿಬಂದಿ ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದರು.

Category
ಕರಾವಳಿ ತರಂಗಿಣಿ