image image
ಬ್ರೇಕಿಂಗ್ ನ್ಯೂಸ್
ಬ್ರೇಕಿಂಗ್ ನ್ಯೂಸ್

PSI ನೇಮಕಾತಿಗೆ ನಕಲಿ ಅಂಕಪಟ್ಟಿ ಸಲ್ಲಿಕೆ: ಕಾನ್ಸ್‌ಟೇಬಲ್ ವಿರುದ್ಧ ಎಫ್ಐಆರ್

PSI ನೇಮಕಾತಿಗೆ ನಕಲಿ ಅಂಕಪಟ್ಟಿ ಸಲ್ಲಿಕೆ: ಕಾನ್ಸ್‌ಟೇಬಲ್ ವಿರುದ್ಧ ಎಫ್ಐಆರ್

ಬೆಂಗಳೂರು: ಪಿಎಸ್ಐ ನೇಮಕಾತಿ ಪ್ರಕ್ರಿಯೆಗೆ ನಕಲಿ ಅಂಕಪಟ್ಟಿ ಸಲ್ಲಿಸಿದ್ದ ಪೊಲೀಸ್ ಕಾನ್ಸ್‌ಟೇಬಲ್ ವಿರುದ್ಧ ಎಫ್ಐಆರ್ ದಾಖಲಾಗಿದೆ.

ಪೊಲೀಸ್ ನೇಮಕಾತಿ ವಿಭಾಗದ ಅಧಿಕಾರಿಯೋರ್ವರು ನೀಡಿದ ದೂರಿನ ಅನ್ವಯ ಭಾರತೀನಗರ ಠಾಣೆಯ ಕಾನ್ಸ್‌ಟೇಬಲ್ ಪೈಗಂಬರ್ ನದಾಫ್ ವಿರುದ್ಧ ವಿಧಾನಸೌಧ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಭಾರತೀನಗರ ಠಾಣೆಯಲ್ಲಿ ಕಾನ್ಸ್‌ಟೇಬಲ್ ಆಗಿ ಕರ್ತವ್ಯ ನಿರ್ವಹಿಸುತ್ತಿರುವ ಪೈಗಂಬರ್ ನದಾಫ್, ಇತ್ತೀಚೆಗೆ ಕ್ರೀಡಾ ಕೋಟಾದಲ್ಲಿ ಪಿಎಸ್ಐ ಆಗಿ ನೇಮಕವಾಗಿದ್ದರು. ನೇಮಕಾತಿ ಪ್ರಕ್ರಿಯೆಗೆ ಪೈಗಂಬರ್ ನದಾಫ್ ಸಲ್ಲಿಸಿದ್ದ ಬಿ.ಎ ಪದವಿಯ ಅಂಕಪಟ್ಟಿ ನೈಜತೆಗೆ ಮೈಸೂರು ವಿವಿಗೆ ಕಳುಹಿಸಲಾಗಿತ್ತು. ಪರಿಶೀಲನೆ ವೇಳೆ ಅಂಕಪಟ್ಟಿ ನಕಲಿ ಎಂಬುವುದು ಪತ್ತೆಯಾಗಿರುವ ಹಿನ್ನೆಲೆಯಲ್ಲಿ ಅವರ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಪೊಲೀಸ್ ನೇಮಕಾತಿ ವಿಭಾಗದ ಅಧಿಕಾರಿಗಳು ವಿಧಾನಸೌಧ ಠಾಣೆಗೆ ದೂರು ಸಲ್ಲಿಸಿದ್ದರು. ಅದರ ಅನ್ವಯ ಎಫ್ಐಆರ್ ದಾಖಲಿಸಿಕೊಳ್ಳಲಾಗಿದ್ದು, ತನಿಖೆ ನಡೆಸುತ್ತಿರುವುದಾಗಿ ಪೊಲೀಸರು ತಿಳಿಸಿದ್ದಾರೆ.

Category
ಕರಾವಳಿ ತರಂಗಿಣಿ