ಮಂಗಳೂರು: ಮುಂಬೈಯಿಂದ ಮಂಗಳೂರು ನಗರಕ್ಕೆ ಮಾದಕದ್ರವ್ಯ ಗಾಂಜಾ ಸಾಗಾಟ ಮಾಡಿ ಮಾರಾಟ ಮಾಡುತ್ತಿದ್ದವನನ್ನು ಬಂಧಿಸಿದ ಸಿಸಿಬಿ ಪೊಲೀಸರು ಪೊಲೀಸರು 6.7ಕೆಜಿ ಗಾಂಜಾ ವಶಪಡಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ. ಉಡುಪಿ ಜಿಲ್ಲೆಯ ಅಂಬಲಪಾಡಿ ಕುಂಜಗುಡ್ಡೆ ಹೌಸ್ ನಿವಾಸಿ ಅಖಿಲೇಶ್ ಶೆಟ್ಟಿ ಬಂಧಿತ ಆರೋಪಿ.
ಅಖಿಲೇಶ್ ಮುಂಬೈಯಿಂದ ಗಾಂಜಾ ಖರೀದಿಸಿ ಮುಲ್ಕಿ ಪರಿಸರದಲ್ಲಿ ಸಾರ್ವಜನಿಕರಿಗೆ ಹಾಗೂ ವಿದ್ಯಾರ್ಥಿಗಳಿಗೆ ಮಾರಾಟ ಮಾಡುತ್ತಿದ್ದ. ಈ ಬಗ್ಗೆ ಖಚಿತ ಮಾಹಿತಿಯನ್ನು ಪಡೆದ ಮಂಗಳೂರು ಸಿಸಿಬಿ ಪೊಲೀಸರು ಮುಲ್ಕಿ ಬಪ್ಪನಾಡು ಪರಿಸರದಲ್ಲಿ ದಾಳಿ ನಡೆಸಿ ಆರೋಪಿಯನ್ನು ಬಂಧಿಸಿದ್ದಾರೆ.
ಆತನ ವಶದಿಂದ 1,62,000 ರೂ. ಮೌಲ್ಯದ 6.7 ಕೆಜಿ ಗಾಂಜಾ, ಮೊಬೈಲ್ ಫೋನ್, 660 ರೂ. ನಗದು ಸ್ವಾಧೀನಪಡಿಸಿಕೊಳ್ಳಲಾಗಿದ್ದು, ವಶಪಡಿಸಿಕೊಂಡ ಸೊತ್ತಿನ ಒಟ್ಟು ಮೌಲ್ಯ 1,63,000ರೂ. ಆಗಬಹುದು ಎಂದು ಅಂದಾಜಿಸಲಾಗಿದೆ. ಈ ಬಗ್ಗೆ ಮುಲ್ಕಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.