image image
ಬ್ರೇಕಿಂಗ್ ನ್ಯೂಸ್
ಬ್ರೇಕಿಂಗ್ ನ್ಯೂಸ್

ದೇವಸ್ಥಾನಕ್ಕೆ ಬಿಟ್ಟ ಹರಕೆ ಕೋಣ ನಾಪತ್ತೆ: ಪೊಲೀಸರಿಗೆ ದೂರು

ದೇವಸ್ಥಾನಕ್ಕೆ ಬಿಟ್ಟ ಹರಕೆ ಕೋಣ ನಾಪತ್ತೆ: ಪೊಲೀಸರಿಗೆ ದೂರು

ಹಾವೇರಿ: ದುರ್ಗಾದೇವಿ ದೇವಸ್ಥಾನಕ್ಕೆ ಬಿಟ್ಟಿದ್ದ ದೇವಿಯ ಕೋಣ  ಕಾಣೆಯಾಗಿದ್ದು, ಕೋಣವನ್ನು ಹುಡುಕಿಕೊಡುವಂತೆ ಗ್ರಾಮಸ್ಥರು ಪೊಲೀಸ್ ಠಾಣೆ ಮೆಟ್ಟಿಲೇರಿದ ಘಟನೆ ಹಾವೇರಿ ಜಿಲ್ಲೆ ರಟ್ಟಿಹಳ್ಳಿ ತಾಲೂಕಿನ ಮಕರಿ ಗ್ರಾಮದಲ್ಲಿ ನಡೆದಿದೆ.

ಕಳೆದ ಕೆಲವು ವರ್ಷಗಳಿಂದ ಗ್ರಾಮದ ದೇವಿಗೆ ಹಬ್ಬದ ಕೋಣವನ್ನು ಬಿಡಲಾಗಿತ್ತು. ಆದರೆ ಕಳೆದ ಎರಡು ತಿಂಗಳಿನಿಂದ ಕೋಣ ನಾಪತ್ತೆಯಾಗಿದೆ. ಗ್ರಾಮದ ಜನರು ಕೋಣವನ್ನು ಹುಡುಕಾಡಿ ಸಿಗದೇ ಇದ್ದಾಗ ಕಾಣೆಯಾಗಿರುವ ದೇವರ ಕೋಣವನ್ನು ಹುಡುಕಿ ಕೊಡುವಂತೆ ರಟ್ಟಿಹಳ್ಳಿ ಠಾಣೆಗೆ ದೌಡಾಯಿಸಿ ಪೊಲೀಸರಿಗೆ ಮನವಿ ಸಲ್ಲಿಸಿದ್ದಾರೆ.

Category
ಕರಾವಳಿ ತರಂಗಿಣಿ