image image
ಬ್ರೇಕಿಂಗ್ ನ್ಯೂಸ್
ಬ್ರೇಕಿಂಗ್ ನ್ಯೂಸ್

ವಿಳಾಸ ಕೇಳುವ ನೆಪದಲ್ಲಿ ಮಹಿಳೆಯ ಸರ ಕಳ್ಳತನ: ಆರೋಪಿ ಸೆರೆ

ವಿಳಾಸ ಕೇಳುವ ನೆಪದಲ್ಲಿ ಮಹಿಳೆಯ ಸರ ಕಳ್ಳತನ: ಆರೋಪಿ ಸೆರೆ

ಮಂಗಳೂರು: ದ್ವಿ ಚಕ್ರ ವಾಹನದಲ್ಲಿ ಬಂದು ವಿಳಾಸ ಕೇಳುವ ನೆಪದಲ್ಲಿ ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಒಂಟಿ ಮಹಿಳೆಯ ಕುತ್ತಿಗೆಯಲ್ಲಿದ್ದ ಚಿನ್ನದ ಸರವನ್ನು ಎಳೆದೊಯ್ದು ಪರಾರಿಯಾಗಿದ್ದ ಹಳೆಯಂಗಡಿಯ ಇಂದಿರಾ ನಗರ ನಿವಾಸಿ ಅಬ್ದುಲ್‌ ರವೂಫ್(30) ಎಂಬ ಸರಗಳ್ಳನನ್ನು ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಡಿಸೆಂಬರ್ 12ರಂದು ಮಧ್ಯಾಹ್ನ 12:40ರ ಸುಮಾರಿಗೆ ಮಂಗಳೂರಿನ ತೆಂಕ ಎಡಪದವು ಗ್ರಾಮದ ಶಿಬ್ರಿಕೆರೆ ಗಣೇಶ್ ಮಿಲ್ ಬಳಿ ಇರುವ ಒಳರಸ್ತೆಯಲ್ಲಿ ಮಹಿಳೆಯೊಬ್ಬಳರು ನಡೆದುಕೊಂಡು ಹೋಗುತ್ತಿದ್ದ ವೇಳೆ ಸ್ಕೂಟರ್‌ಲ್ಲಿ ಬಂದ ಅಬ್ದುಲ್ ರವೂಫ್ ವಿಳಾಸ ಕೇಳುವ ನೆಪದಲ್ಲಿ ಅವರ ಕತ್ತಿನಲ್ಲಿದ್ದ ಚಿನ್ನದ ಸರವನ್ನು ಎಳೆದೊಯ್ದು ಪರಾರಿಯಾಗಿದ್ದಾನೆ. ಈ ಬಗ್ಗೆ ಬಜಪೆ ಪೊಲೀಸ್‌ ಠಾಣೆಯಲ್ಲಿ ಸುಲಿಗೆಗೆಸಂಬಂಧಿಸಿದಂತೆ ಪ್ರಕರಣ ದಾಖಲಾಗಿತ್ತು.

ಪ್ರಕರಣಕ್ಕೆ ಸಂಬಂದಿಸಿದಂತೆ ವಿಶೇಷ ತಂಡ ರಚಿಸಿದ ಬಜಪೆ ಪೊಲೀಸ್‌ ಠಾಣೆಯ ಪೊಲೀಸ್ ನಿರೀಕ್ಷಕ ಸಂದೀಪ್ ಜಿ.ಎಸ್.ರವರು ಆರೋಪಿತ ಅಬ್ದುಲ್ ರವೂಫ್ ಬಂಧಿಸಿದ್ದಾರೆ. ಆರೋಪಿತನಿಂದ 70,000ರೂ. ಮೌಲ್ಯದ ಚಿನ್ನದ ಸರ, 50,000. ಮೌಲ್ಯದ ಆಟೋರಿಕ್ಷಾ ಮತ್ತು ಇತರ ಸೊತ್ತುಗಳನ್ನು ಸ್ವಾಧೀನಪಡಿಸಿಕೊಂಡಿದ್ದು,  ಆರೋಪಿಯನ್ನು ನ್ಯಾಯಾಲಯದ ಮುಂದೆ ಹಾಜರುಪಡಿಸಿ, ನ್ಯಾಯಾಂಗ ಬಂಧನದಲ್ಲಿರುತ್ತಾನೆ.

ಆರೋಪಿಯ ವಿರುದ್ಧ ಮೂಡುಬಿದಿರೆ ಠಾಣೆ, ಮುಲ್ಕಿ ಠಾಣೆ, ಬಜಪೆ ಠಾಣೆ, ಉಪ್ಪಿನಂಗಡಿ ಠಾಣೆ ಮತ್ತು ಹಾಸನ ಜಿಲ್ಲೆಯ ಅರೇಹಳ್ಳಿ ಪೊಲೀಸ್ ಠಾಣೆಯಲ್ಲಿ ಒಟ್ಟು 10 ಸುಲಿಗೆ ಮತ್ತು ಕಳವಿಗೆ ಸಂಬಂಧಿಸಿದ ಪ್ರಕರಣ ದಾಖಲಾಗಿರುತ್ತದೆ. ಸದ್ರಿ ಪ್ರಕರಣಗಳಲ್ಲಿ ಆರೋಪಿ ಎರಡು ತಿಂಗಳ ಹಿಂದೆಯಷ್ಟೇ ಜಾಮೀನು ಪಡೆದುಕೊಂಡು ಜೈಲಿನಿಂದ ಹೊರಬಂದಿದ್ದ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Category
ಕರಾವಳಿ ತರಂಗಿಣಿ