ಬಂಟ್ವಾಳ: ಇಂದು ಬೆಳಿಗ್ಗೆ 7.30 ಗಂಟೆಗೆ ಬಂಟ್ವಾಳ ತಾಲೂಕಿನ ಪಂಜಿಕಲ್ಲು ಗ್ರಾಮದ ಕಂಬಲ್ದಡ್ಡ ಎಂಬಲ್ಲಿರುವ ರುಕ್ಮಯ್ಯ ಪೂಜಾರಿ ಎಂಬುವರಿಗೆ ಸೇರಿದ ಮನೆ ಮೇಲೆ ದಾಳಿ ನಡೆಸಿದ ಬಂಟ್ವಾಳ ವಲಯದ ಅಬಕಾರಿ ಉಪ ನಿರೀಕ್ಷಕರಾದ ರಾಜ ನಾಯ್ಕ್ ತಂಡ ಮನೆಯಲ್ಲಿದ್ದ 55 ಲೀ ಬೆಲ್ಲದ ಕೊಳೆ ಮತ್ತು 1.5 ಲೀಟರ್ ಕಳ್ಳಬಟ್ಟಿ ಸಾರಾಯಿಯನ್ನು ಹಾಗೂ ಕಳ್ಳಬಟ್ಟಿ ತಯಾರಿಸುವ ಸಾಮಗ್ರಿಗಳನ್ನು ವಶಕ್ಕೆ ಪಡೆದು ಆರೋಪಿಯನ್ನು ಬಂಧಿಸಲಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.