ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು ಹೊರವಲಯದ ಫೆರ್ಮಾಯಿ ಎಂಬಲ್ಲಿ ಮನೋಹರ್ ಪಿರೇರಾ (46) ಎಂಬವರು ವಿಡಿಯೋ ಮಾಡಿ ಆತ್ಮಹತ್ಯೆಗೆ ಶರಣಾಗಿದ್ದರು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಕಂಕನಾಡಿ ಗ್ರಾಮಾಂತರ ಪೊಲೀಸರು ಕೊನೆಗೂ MCC ಬ್ಯಾಂಕ್ ನ ಅಧ್ಯಕ್ಷ ಅನಿಲ್ ಲೋಬೊ ನನ್ನ ಬಂಧಿಸಿದ್ದಾರೆ.
ಮನೋಹರ್ ಎಂ ಸಿ ಸಿ ಬ್ಯಾಂಕ್‌ನಿಂದ 15 ಲಕ್ಷ ಸಾಲ ಪಡೆದಿದ್ದರು. ಕೊರೊನಾ ಬಳಿಕ ನಷ್ಟಕ್ಕೀಡಾಗಿ ಬ್ಯಾಂಕ್ ಸಾಲ ಕಟ್ಟಲು ಆಗಿರಲಿಲ್ಲ. ಹೀಗಾಗಿ ಬ್ಯಾಂಕ್‌ನ ಆಡಳಿತ ಮಂಡಳಿ ಮನೆ ಜಪ್ತಿ ಮಾಡಲು ಮುಂದಾಗಿದೆ. ಇದರಿಂದ ನೊಂದ ಮನೋಹರ್ ಪಿರೇರಾ ಅವರು ಆತ್ಮಹತ್ಯೆಗೂ ಮುನ್ನ "ಬ್ಯಾಂಕ್ ಅಧ್ಯಕ್ಷ ಅನಿಲ್ ಲೋಬೊ ಕಿರುಕುಳ ನೀಡಿದ್ದಾರೆ. ನನ್ನ ಸಾವಿಗೆ ಅನೀಲ್ ಲೋಬೊ ಕಾರಣ" ಎಂದು ವಿಡಿಯೋ ಮಾಡಿ ಬಳಿಕ, ವಿಡಿಯೋವನ್ನು ವಾಟ್ಸಾಪ್ ಸ್ಟೇಟಸ್‌ಗೆ ಹಾಕಿದ್ದು ಅಲ್ಲದೆ, ಜಮಾ ಮಾಡಿದ ಹಣವನ್ನು ಅಧ್ಯಕ್ಷ ಅನಿಲ್ ಲೋಬೊ ಸ್ವತಃ ಬಳಸಿಕೊಂಡಿದ್ದು ಈ ಹಣದಲ್ಲಿ 9 ಲಕ್ಷ ರೂ ಯನ್ನು ತಿಂದಿದ್ದಾರೆಂದು ಹಾಗೂ ಮತ್ತೆ ಸಾಲ ಮರು ಪಾವತಿ ಮಾಡಲು ಅಧ್ಯಕ್ಷ ಕಿರುಕುಳ ನೀಡುತ್ತಿದ್ದನೆಂದು ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆ ಮಾಡಿದ್ದರು. ಎಂಸಿಸಿ ಬ್ಯಾಂಕ್ ಅಧ್ಯಕ್ಷ ಅನಿಲ್ ಲೋಬೊ ವಿರುದ್ಧ ಪ್ರಕರಣ ದಾಖಲಾಗಿತ್ತು.
ಇವರಿಬ್ಬರು ಪರಸ್ಪರ ಪರಿಯಸ್ಥರಾಗಿದ್ದರು. ಇದೀಗ ಕಂಕನಾಡಿ ಗ್ರಾಮಾಂತರ ಪೊಲೀಸರು ಪ್ರಕರಣ ದಾಖಲಿಸಿ ಅನಿಲ್ ಲೋಬೊ ನನ್ನು ವಶಕ್ಕೆ ಪಡೆದಿದ್ದಾರೆ ಎಂದು ಪೊಲೀಸ್ ಮೂಲಗಳಿಂದ ತಿಳಿದಿದೆ.