image image
ಬ್ರೇಕಿಂಗ್ ನ್ಯೂಸ್
ಬ್ರೇಕಿಂಗ್ ನ್ಯೂಸ್

ನಕಲಿ ಇಡಿ ಅಧಿಕಾರಿಗಳಿಂದ ಉದ್ಯಮಿ ಮನೆಗೆ ದಾಳಿ: 30ಲಕ್ಷ ಲೂಟಿ

ನಕಲಿ ಇಡಿ ಅಧಿಕಾರಿಗಳಿಂದ ಉದ್ಯಮಿ ಮನೆಗೆ ದಾಳಿ: 30ಲಕ್ಷ ಲೂಟಿ

ವಿಟ್ಲ: ಇಡಿ ಅಧಿಕಾರಿಗಳು ಎಂದು ನಂಬಿಸಿ ಉದ್ಯಮಿಯ ಮನೆಗೆ ದಾಳಿ ನಡೆಸಿ ಬರೋಬ್ಬರಿ 30 ಲಕ್ಷ ಲೂಟಿ ಮಾಡಿದ ಘಟನೆ ಬೋಳಂತೂರು ಸಮೀಪದ ನಾರ್ಶ ಎಂಬಲ್ಲಿ ನಡೆದಿದೆ.

ಬಂಟ್ವಾಳ ತಾಲ್ಲೂಕಿನ ವಿಟ್ಲ ಪೋಲೀಸ್ ಠಾಣೆ ವ್ಯಾಪ್ತಿಯ ಬೋಳಂತೂರು ಸಮೀಪದ ನಾರ್ಶ ಎಂಬಲ್ಲಿ ಸುಲೈಮಾನ್ ಹಾಜಿ  ಸಿಂಗಾರಿ ಬೀಡಿ ಸಂಸ್ಥೆಯನ್ನು ಅನೇಕ ವರ್ಷಗಳಿಂದ ನಡೆಸುತ್ತಿದ್ದಾರೆ. ತಡರಾತ್ರಿ ಅವರ ಮನೆಗೆ ತಮಿಳುನಾಡು ಮೂಲದ ಕಾರ್ ನಲ್ಲಿ ಆಗಮಿಸಿದ ನಕಲಿ ಇಡಿ ತಂಡ  ದಿಡೀರ್ ದಾಳಿ ನಡೆಸಿದೆ. ನಾವು ಇಡಿ ಅಧಿಕಾರಿಗಳು ‘ ಎಂದು ನಂಬಿಸಿ ಸುಮಾರು ಎರಡು ಗಂಟೆಗಳ ವರೆಗೆ ತನಿಖೆ ನಡೆಸಿದೆ. ಮನೆಯಲ್ಲಿದ್ದ ಸುಮರು 30 ಲಕ್ಷ ರೂಪಾಯಿಗಳನ್ನು ದೋಚಿ ಪರಾರಿಯಾಗಿದ್ದು, ಸ್ಥಳಕ್ಕೆ ವಿಟ್ಲ ಪೊಲೀಸರು ಭೇಟಿ ನೀಡಿದ್ದಾರೆ.

Category
ಕರಾವಳಿ ತರಂಗಿಣಿ