image image
ಬ್ರೇಕಿಂಗ್ ನ್ಯೂಸ್
ಬ್ರೇಕಿಂಗ್ ನ್ಯೂಸ್

ಚರಂಡಿಯಲ್ಲಿ ನವಜಾತ ಶಿಶು ಪತ್ತೆ: ಮಗು ಆರೋಗ್ಯ ಕೇಂದ್ರಕ್ಕೆ ಸ್ಥಳಾಂತರ

ಚರಂಡಿಯಲ್ಲಿ ನವಜಾತ ಶಿಶು ಪತ್ತೆ: ಮಗು ಆರೋಗ್ಯ ಕೇಂದ್ರಕ್ಕೆ ಸ್ಥಳಾಂತರ

ಮೈಸೂರು: ತಾಯಿಗೆ ಬೇಡವಾದ ನವಜಾತ ಶಿಶು ಚರಂಡಿಯಲ್ಲಿ ಪತ್ತೆಯಾದ ಘಟನೆ ಹೆಚ್.ಡಿ.ಕೋಟೆ ತಾಲ್ಲೂಕಿನ ರಾಜೇಗೌಡನ ಹುಂಡಿ ಗ್ರಾಮದಲ್ಲಿ ಬೆಳಕಿಗೆ ಬಂದಿದೆ. ಕೊರೆವ ಚಳಿಯಲ್ಲಿ ಇಡೀ ರಾತ್ರಿ ಬರಿಮೈಯಲ್ಲಿ ಚರಂಡಿ ನೀರಿನಲ್ಲಿ ಕಂಡು ಬಂದಿದೆ. ಬೆಳಗಿನ ಜಾವ ಮಗುವಿನ ಅಳು ಕೇಳಿಸಿಕೊಂಡ ಗ್ರಾಮಸ್ಥರು ಆಶಾ ಕಾರ್ಯಕರ್ತೆಗೆ ಮಾಹಿತಿ ನೀಡಿದ್ದಾರೆ. ನಂತರ ಮಗುವನ್ನು ಸರ್ಕಾರಿ ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ. ಆಶಾ ಕಾರ್ಯಕರ್ತೆ ಸರೋಜಮ್ಮ ಮತ್ತು ಅಂಗನವಾಡಿ ಕಾರ್ಯಕರ್ತೆ ಚಂದ್ರಮ್ಮ ಮಾನವೀಯತೆಯನ್ನು ಸ್ಥಳೀಯರು ಪ್ರಶಂಸಿಸಿದ್ದಾರೆ.

Category
ಕರಾವಳಿ ತರಂಗಿಣಿ