image image
ಬ್ರೇಕಿಂಗ್ ನ್ಯೂಸ್
ಬ್ರೇಕಿಂಗ್ ನ್ಯೂಸ್

ಪಾರಿವಾಳ ಬೆಟ್ಟಿಂಗ್ ವಿಚಾರಕ್ಕೆ ಸ್ನೇಹಿತರ ನಡುವೆ ಗಲಾಟೆ: 7ನೇ ತರಗತಿ ವಿದ್ಯಾರ್ಥಿ ಆತ್ಮಹತ್ಯೆ

ಪಾರಿವಾಳ ಬೆಟ್ಟಿಂಗ್ ವಿಚಾರಕ್ಕೆ ಸ್ನೇಹಿತರ ನಡುವೆ ಗಲಾಟೆ: 7ನೇ ತರಗತಿ ವಿದ್ಯಾರ್ಥಿ ಆತ್ಮಹತ್ಯೆ

ತುಮಕೂರು: ಕ್ಷುಲ್ಲಕ ವಿಚಾರಕ್ಕೆ 7ನೇ ತರಗತಿ ಓದುತ್ತಿದ್ದ ವಿದ್ಯಾರ್ಥಿಯೊಬ್ಬ ಡೆತ್ ನೋಟ್ ಆತ್ಮಹತ್ಯೆ (Suicide) ಮಾಡಿಕೊಂಡಿರುವ ಧಾರುಣ ಘಟನೆಯೊಂದು ತುಮಕೂರು  ನಗರದ ವಿಜಯನಗರ 2ನೇ ಮುಖ್ಯ ರಸ್ತೆಯಲ್ಲಿ ನಡೆದಿದೆ. ಬಿಜೆಪಿ ಕಾರ್ಯಕರ್ತೆ ಶಕುಂತಲಾ ನಟರಾಜ್ ರ 13 ವರ್ಷದ ಪುತ್ರ ತ್ರಿಶಾಲ್ ಮೃತ ದುರ್ದೈವಿಯಾಗಿದ್ದು, ಈತ ಶಾಲಾ ಸಮವಸ್ತ್ರದಲ್ಲೇ ಮನೆಯಲ್ಲಿ ಯಾರೂ ಇಲ್ಲದ ಸಮಯದಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

ನಗರದ ಸರ್ವೊದಯ ಸ್ಕೂಲ್ ನಲ್ಲಿ 7 ನೇ ತರಗತಿ ಓದುತ್ತಿದ್ದು, ಪಾರಿವಾಳದ ಬೆಟ್ಟಿಂಗ್ ವಿಚಾರವಾಗಿ ಸ್ನೇಹಿತರ ಜೊತೆ ಗಲಾಟೆಯಾಗಿದೆ. ಅದೇ ವಿಚಾರಕ್ಕೆ ನೊಂದು ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ಶಂಕಿಸಲಾಗಿದೆ. 

ಸ್ಥಳಕ್ಕೆ ಜಯನಗರ ಪೊಲೀಸರು ಭೇಟಿ ನೀಡಿ ಸ್ಥಳ ಪರಿಶೀಲನೆ ನಡೆಸಿ ಮೃತದೇಹ ತುಮಕೂರು ಜಿಲ್ಲಾಸ್ಪತ್ರೆಗೆ ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದೆ. ಘಟನೆ ಸಂಬಂಧ ಜಯನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Category
ಕರಾವಳಿ ತರಂಗಿಣಿ