image image
ಬ್ರೇಕಿಂಗ್ ನ್ಯೂಸ್
ಬ್ರೇಕಿಂಗ್ ನ್ಯೂಸ್

ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣದ ಪ್ರಮುಖ ಆರೋಪಿಗಳಿಗೆ ಆಶ್ರಯ ನೀಡಿದ್ದ ಅತೀಕ್ ಅಹಮದ್ ಬಂಧನ

ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣದ ಪ್ರಮುಖ ಆರೋಪಿಗಳಿಗೆ ಆಶ್ರಯ ನೀಡಿದ್ದ ಅತೀಕ್ ಅಹಮದ್ ಬಂಧನ

ಬೆಂಗಳೂರು : ಬಿಜೆಪಿ ಯುವ ಮೋರ್ಚಾದ ಸದಸ್ಯ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣದ ಮತ್ತೋರ್ವ ಆರೋಪಿತನನ್ನ ರಾಷ್ಟ್ರೀಯ ತನಿಖಾ ದಳ (ಎನ್‌ಐಎ) ಬಂಧಿಸಿದೆ. ಅತೀಕ್ ಅಹಮದ್ ಬಂಧಿತ ಆರೋಪಿ. ಪ್ರವೀಣ್ ಹತ್ಯೆ ಹಿಂದಿನ ಮುಖ್ಯ ಸಂಚುಕೋರ ಎಂದು ಗುರುತಿಸಲಾದ ಮುಸ್ತಫಾ ಪೈಚಾರ್‌ಗೆ ಆಶ್ರಯ ನೀಡಿದ್ದ ಅತೀಕ್ ಅಹಮದ್‌ನನ್ನ ಪ್ರಕರಣದಲ್ಲಿ 21ನೇ ಆರೋಪಿ ಎಂದು ಗುರುತಿಸಲಾಗಿತ್ತು.

ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ (ಪಿಎಫ್ಐ) ನಾಯಕತ್ವದ ಅಡಿ ಕೆಲಸ ಮಾಡಿದ್ದ ಅತೀಕ್‌ ಅಹಮದ್, ಹತ್ಯೆ ಪ್ರಕರಣದ ಮುಖ್ಯ ಸಂಚುಕೋರ ಮುಸ್ತಫಾ ಪೈಚಾರ್‌ಗೆ ಆಶ್ರಯ ನೀಡಿದ್ದ. ಹಾಗೂ ಪ್ರವೀಣ್ ನೆಟ್ಟಾರು ಹತ್ಯೆಯ ಬಳಿಕ ಮುಸ್ತಫಾ ಫೈಚಾರ್ ಚೆನ್ನೈಗೆ ಪರಾರಿಯಾಗಲು ಅತೀಕ್ ಅಹಮದ್ ನೆರವಾಗಿದ್ದ. ಜನರಲ್ಲಿ ಭಯವುಂಟುಮಾಡಲು ಮತ್ತು ಕೋಮು ಗಲಭೆಯನ್ನು ಪ್ರಚೋದಿಸಲು ಪಿಎಫ್‌ಐನ ಅಜೆಂಡಾದ ಭಾಗವಾಗಿ ಪ್ರವೀಣ್ ನೆಟ್ಟಾರು ಹತ್ಯೆಯನ್ನ ಮುಸ್ತಫಾ ಪೈಚಾರ್ ಯೋಜಿಸಿ ಕಾರ್ಯಗತಗೊಳಿಸಿದ್ದ. ಮೇ 2024ರಲ್ಲಿ ಮುಸ್ತಫಾ ಪೈಚಾರ್‌ನನ್ನ ಎನ್ಐಎ ಅಧಿಕಾರಿಗಳು ಬಂಧಿಸಿದ್ದರು.

Category
ಕರಾವಳಿ ತರಂಗಿಣಿ