ಮಂಗಳೂರು : ಉತ್ತರ ಸಂಚಾರ ಪೊಲೀಸ್ ಠಾಣೆಯ ಪೊಲೀಸ್ ನಿರೀಕ್ಷಕರಾದ ಮಹಮ್ಮದ್ ಶರೀಫ್ ಕೆ ಮತ್ತು ಸಿಬ್ಬಂದಿ ಪ್ರವೀಣ್ ನಾಯ್ಕ ಅವರು ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದ ಘಟನೆ ಇಂದು ನಡೆದಿದೆ.
ಓರ್ವ ವ್ಯಕ್ತಿ ಸ್ಕೂಟರ್ ವೊಂದನ್ನು ಮಂಗಳೂರು ಉತ್ತರ ಸಂಚಾರ ಪೊಲೀಸ್ ಠಾಣೆಯಿಂದ ಬಿಡುಗಡೆಗೊಳಿಸಲು ನ್ಯಾಯಾಲಯದಿಂದ ಆದೇಶವಾಗಿದ್ದು, ಈ ಬಗ್ಗೆ ಮಂಗಳೂರು ಉತ್ತರ ಸಂಚಾರ ಪೊಲೀಸ್ ಠಾಣೆಯ ಪೊಲೀಸ್ ನಿರೀಕ್ಷಕರಾದ ಮಹಮ್ಮದ್ ಶರೀಫ್ ರವರನ್ನು ಭೇಟಿ ಮಾಡಿದಾಗ ರೂ. 5000 ಲಂಚದ ಹಣಕ್ಕೆ ಬೇಡಿಕೆ ಇಟ್ಟಿದ್ದರೆಂದು ಆರೋಪಿಸಲಾಗಿದೆ. ಸ್ಕೂಟರ್ ನ್ನು ಬಿಡುಗಡೆಗೊಳಿಸಲು ರೂ. 3 ಸಾವಿರ ಲಂಚ ಸ್ವೀಕಾರ ಮಾಡುತ್ತಿದ್ದ ವೇಳೆ ದಾಳಿ ಆಗಿದೆ. ಪೊಲೀಸರು ಸದರಿ ಅಧಿಕಾರಿ ಇನ್ಸೆಕ್ಟರ್ ಮಹಮ್ಮದ್ ಶರೀಫ್ ಮತ್ತು ಸಿಬ್ಬಂದಿ ಪಿಸಿ ಪ್ರವೀಣ್ ನಾಯ್ ನನ್ನು ವಶಕ್ಕೆ ಪಡೆದು ತನಿಖೆ ನಡೆಸುತ್ತಿದ್ದಾರೆ.
ಪೊಲೀಸ್ ನಿರೀಕ್ಷಕರಾದ ಮಹಮ್ಮದ್ ಶರೀಫ್ ರವರು ಠಾಣಾ ಬರಹಗಾರರಾದ ನಾಗರತ್ನ ರವರನ್ನು ಭೇಟಿ ಮಾಡಲು ತಿಳಿಸಿದ್ದರೆಂದೂ, ನಾಗರತ್ನರವರು ಅವಾಚ್ಯ ಶಬ್ದಗಳಿಂದ ಬೈದು ರೂ 3000 ಲಂಚದ ಹಣಕ್ಕೆ ಬೇಡಿಕೆ ಇಟ್ಟಿದ್ದರೆನ್ನಲಾಗುತ್ತಿದೆ. ಕಾನೂನು ಬದ್ಧವಾಗಿ ಮಾಡಬೇಕಾದ ಸರ್ಕಾರಿ ಕೆಲಸಕ್ಕೆ ಲಂಚ ನೀಡಿ ಕೆಲಸ ಮಾಡಿಸಿಕೊಳ್ಳಲು ಇಚ್ಛೆ ಇಲ್ಲದ ಕಾರಣ ಸ್ಕೂಟರ್ ಮಾಲಕ ಮಂಗಳೂರು ಲೋಕಾಯುಕ್ತ ಪೊಲೀಸ್ ಠಾಣಿಗೆ ದೂರು ನೀಡಿದ್ದರು. ಈಬಗ್ಗೆ ಮಂಗಳೂರು ಲೋಕಾಯುಕ್ತ ಪೊಲೀಸ್ ಠಾಣೆಯಲ್ಲಿ ಪೊಲೀಸ್ ನಿರೀಕ್ಷಕರಾದ ಮಹಮ್ಮದ್ ಶರೀಫ್ ಮತ್ತು ಠಾಣಾ ಬರಹಗಾರರಾದ ನಾಗರತ್ನರವರ ವಿರುದ್ಧ ಪ್ರಕರಣ ದಾಖಲಾಗಿರುತ್ತದೆ ಇನ್ನೂ ಠಾಣಾ ಬರಹಗಾರ ನಾಗರತ್ನ ಮೇಲೆ ಕೂಡ ಪ್ರಕರಣ ದಾಖಲಾಗಿದೆ.
ಕರ್ನಾಟಕ ಲೋಕಾಯುಕ್ತ, ಮಂಗಳೂರು ರವರ ಮಾರ್ಗದರ್ಶನದಲ್ಲಿ, ಮಂಗಳೂರು ಲೋಕಾಯುಕ್ತ ಪೊಲೀಸ್ ಠಾಣೆಯ ಪೊಲೀಸ್ ಉಪಾಧೀಕ್ಷಕರಾದ ಡಾ. ಗಾನ ಪಿ ಕುಮಾರ್, ಪೊಲೀಸ್ ನಿರೀಕ್ಷಕರಾದ ಅಮಾನುಲ್ಲಾ.ಎ, ಚಂದ್ರಶೇಖರ್ ಕೆ.ಎನ್ ರವರು ಮತ್ತು ಉಡುಪಿ ಪೊಲೀಸ್ ಠಾಣೆಯ ಪೊಲೀಸ್ ನಿರೀಕ್ಷಕರಾದ ಮಂಜುನಾಥ ಹಾಗೂ ಇನ್ನಿತರರು ಕಾರ್ಯಾಚರಣೆ ವೇಳೆವಿದ್ದಾರೆಂದು ತಿಳಿದುಬಂದಿದೆ