image image
ಬ್ರೇಕಿಂಗ್ ನ್ಯೂಸ್
ಬ್ರೇಕಿಂಗ್ ನ್ಯೂಸ್

ದರೋಡೆ ಪ್ರಕರಣದಲ್ಲಿ ಸ್ಥಳ ಮಹಜರು ವೇಳೆ ತಪ್ಪಿಸಲೆತ್ನಿಸಿದ ಮತ್ತೋರ್ವ ಆರೋಪಿಗೆ ಗುಂಡೇಟು: ಆಸ್ಪತ್ರೆಗೆ ದಾಖಲು..!

ದರೋಡೆ ಪ್ರಕರಣದಲ್ಲಿ ಸ್ಥಳ ಮಹಜರು ವೇಳೆ ತಪ್ಪಿಸಲೆತ್ನಿಸಿದ ಮತ್ತೋರ್ವ ಆರೋಪಿಗೆ ಗುಂಡೇಟು: ಆಸ್ಪತ್ರೆಗೆ ದಾಖಲು..!

ಮಂಗಳೂರು : ಕೋಟೆಕಾರು ವ್ಯವಸಾಯ ಸೇವಾ ಸಹಕಾರಿ ಸಂಘ ತಲಪಾಡಿ ಕೆ.ಸಿ.ರೋಡ್ ಶಾಖೆಯಲ್ಲಿ ಜ.17 ರಂದು ನಡೆದ ದರೋಡೆ ಪ್ರಕರಣದ ನಾಲ್ವರು ಆರೋಪಿಗಳನ್ನು ತಮಿಳುನಾಡಿನಲ್ಲಿ ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದರು. ಸಿಸಿಬಿ ಪೊಲೀಸರು ಹಾಗೂ ಉಳ್ಳಾಲ ಪೊಲೀಸರು ಜಂಟಿಯಾಗಿ ಆರೋಪಿಗಳನ್ನು ಸ್ಥಳ ಮಹಜರಿಗೆ ತಲಪಾಡಿಯ ಬಳಿ ಕರೆದುಕೊಂಡು ಹೋಗಿದ್ದು, ಸ್ಥಳ ಮಹಜರು ವೇಳೆ ಪೊಲೀಸರ ಮೇಲೆ ಹಲ್ಲೆಗೆ ಯತ್ನಿಸಿ ತಪ್ಪಿಸಿಕೊಳ್ಳಲು ಯತ್ನ ಹಿನ್ನೆಲೆ ಆರೋಪಿ ಕಾಲಿಗೆ ಫೈರಿಂಗ್ ಮಾಡಲಾಗಿತ್ತು. ಆದರೆ ಈಗ ಮತ್ತೋರ್ವ ಆರೋಪಿ ಮಹಜರ್ ಸಂದರ್ಭದಲ್ಲಿ ಪೊಲೀಸರ ಮೇಲೆ ದಾಳಿ ನಡೆಸಿ ತಪ್ಪಿಸಿಕೊಳ್ಳಲು ಯತ್ನಿಸಿದ ಆರೋಪಿ ಮುರುಗಂಡಿ ಥೇವರ್ ಮೇಲೆ ಪೊಲೀಸರಿಂದ ಗುಂಡು ಹಾರಿಸಲಾಗಿದೆ.

ಮಂಗಳೂರು ಹೊರವಲಯದ ಉಳ್ಳಾಲದ ಅಜ್ಜಿನಡ್ಕ ಎಂಬಲ್ಲಿ ಈ ಘಟನೆ ನಡೆದಿದ್ದು, ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದ್ದು ಆರೋಪಿ ದರೋಡೆಗೆ ಬಳಸಿದ್ದ ಪಿಸ್ತೂಲ್ ಅನ್ನು ಬಚ್ಚಿಟ್ಟಿದ್ದ. ಅದನ್ನು ವಶಪಡಿಸಿಕೊಳ್ಳಲು  ಆತನನ್ನು ಸ್ಥಳಕ್ಕೆ ಕರೆದುಕೊಂಡು ಹೋಗಲಾಗಿತ್ತು. ಈ ವೇಳೆ ಪೊಲೀಸ್‌ ಕಾನ್‌ಸ್ಟೆಬಲ್ ಗೆ ಒದ್ದು ತಪ್ಪಿಸಿಕೊಳ್ಳುವುದಕ್ಕೆ ಪ್ರಯತ್ನ ಮಾಡಿದ್ದಾನೆ. ಈ ಸಂದರ್ಭದಲ್ಲಿ ಪಿಸಿ ಮಂಜುನಾಥ್‌ಗೆ ಗಾಯವಾಗಿದೆ. ಇಬ್ಬರಿಗೂ ಚಿಕಿತ್ಸೆ ನಡೆಯುತ್ತಿದೆ.

ಆರೋಪಿ ಮುರುಗಂಡಿ ದೇವ‌ರ್ ತಪ್ಪಿಸಿಕೊಳ್ಳಲು ಯತ್ನಿಸುತ್ತಿದ್ದಂತೆ ಉಳ್ಳಾಲ ಇನ್ಸ್ ಪೆಕ್ಟರ್ ಬಾಲಕೃಷ್ಣ ಆತನ ಕಾಲಿಗೆ ಶೂಟ್ ಮಾಡಿದ್ದಾರೆ. ಇತ್ತೀಚೆಗೆ ಮಂಗಳೂರು ಪೋಲಿಸರ ಗುಂಡಿನ ಸದ್ದು ಆಗಾಗ ಕೇಳಿಸುತ್ತಿರುವುದು ಖದೀಮರಲ್ಲಿ ನಡುಕ ಉಂಟು ಮಾಡುತ್ತಿದೆ.

Category
ಕರಾವಳಿ ತರಂಗಿಣಿ