ಮಂಗಳೂರು: ನಿಷೇಧಿತ ಮಾದಕ ವಸ್ತು ಎಂಡಿಎಂಎ ಸಾಗಾಟ, ಮಾರಾಟ ಮಾಡುತ್ತಿದ್ದ ಇಬ್ಬರನ್ನು ಬಂಧಿಸಿರುವ ಮಂಗಳೂರು ಸಿಸಿಬಿ ಪೊಲೀಸರು ಆರೋಪಿಗಳಿಂದ 23 ಗ್ರಾಂ ಎಂಡಿಎಂಎ ವಶಪಡಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ.
ಬಂಧಿತರನ್ನು ಗುಲ್ಬರ್ಗ ಜಿಲ್ಲೆಯ ಶೇಕ್ ಸಿಕಂದರ್ (22) ಮತ್ತು ಕಾವೂರಿನ ತೌಫೀಕ್ (29) ಎಂದು ಗುರುತಿಸಲಾಗಿದೆ. ಈ ಪೈಕಿ ಶೇಖ್ ಸಿಕಂದರ್ ವಿರುದ್ಧ ಗುಲ್ಬರ್ಗದ ರೋಜಾ ಪೊಲೀಸ್ ಠಾಣೆಯಲ್ಲಿ ಕೊಲೆ ಪ್ರಕರಣ ದಾಖಲಾಗಿರುತ್ತದೆ.
ಆರೋಪಿಗಳು ಮಾದಕ ವಸ್ತುವನ್ನು ಮುಂಬೈಯಿಂದ ಖರೀದಿಸಿ ಗುಲ್ಬರ್ಗ ಮೂಲಕ ಮಂಗಳೂರಿಗೆ ಸಾಗಾಟ ಮಾಡಿ ಕೊಂಡು ಮಂಗಳೂರು ನಗರ ವ್ಯಾಪ್ತಿಯಲ್ಲಿ ಸಾರ್ವಜನಿಕರಿಗೆ ಹಾಗೂ ವಿದ್ಯಾರ್ಥಿಗಳಿಗೆ ಮಾರಾಟ ಮಾಡುತ್ತಿದ್ದ ಬಗ್ಗೆ ಖಚಿತ ಮಾಹಿತಿ ಪಡೆದ ಸಿಸಿಬಿ ಪೊಲೀಸರು ಕಾವೂರು ಪೊಲೀಸ್ ಠಾಣಾ ವ್ಯಾಪ್ತಿಯ ಬಂಗ್ರ ಕೂಳೂರು ಪರಿಸರದಲ್ಲಿ ಕಾರ್ಯಾಚರಣೆ ನಡೆಸಿದರು