ಬಂಟ್ವಾಳ: ನಿಗೂಢ ರೀತಿಯಲ್ಲಿ ನಾಪತ್ತೆಯಾಗಿದ್ದ ಫರಂಗಿಪೇಟೆಯ ದಿಗಂತ್ ಸುಮಾರು 10 ದಿನಗಳ ಬಳಿಕ ಮಾ.8ರಂದು ಉಡುಪಿಯಲ್ಲಿ ಪತ್ತೆಯಾಗಿದ್ದಾನೆ ಎಂದು ವರದಿಯಾಗಿದೆ.
ದಿಗಂತ್ ನನ್ನು ಪೊಲೀಸರು ಬಂಟ್ವಾಳಕ್ಕೆ ಕರೆ ತರುತ್ತಿದ್ದಾರೆ ಎಂದು ತಿಳಿದುಬಂದಿದ್ದು,ಅಗ್ನಿಶಾಮಕ ದಳ, ಡೋನ್, ಶ್ವಾನ ದಳ ಸೇರಿದಂತೆ ದ.ಕ.ಜಿಲ್ಲೆಯ ಪೊಲೀಸ್ ಠಾಣೆಯ ಸುಮಾರು 150 ಪೊಲೀಸ್ ಅಧಿಕಾರಿಗಳಿಂದ ಶನಿವಾರ ಶೋಧಕಾರ್ಯ ನಡೆಸಲಾಗಿದೆ ಎಂದು ದ.ಕ. ಜಿಲ್ಲಾ ಎಸ್ಪಿ ಅವರು ತಿಳಿಸಿದ್ದಾರೆ.