ಮಂಗಳೂರು : ಭಜರಂಗದಳದ ಕಾರ್ಯಕರ್ತರು ಕಾರ್ಯಾಚರಣೆ ನಡೆಸಿ ಅಕ್ರಮ ಗೋಮಾಂಸ ಸಾಗಾಟ ಮಾಡುತ್ತಿದ್ದವರನ್ನು ತಡೆದು ಪೊಲೀಸರಿಗೊಪ್ಪಿಸಿದ ಘಟನೆ ಮಂಗಳೂರಿನ ಕದ್ರಿ ದೇವಸ್ಥಾನದ ದ್ವಾರದ ಬಳಿ ಇಂದು ನಡೆದಿದೆ.
ಟೆಂಪೋದಲ್ಲಿ ಅಕ್ರಮ ಗೋ ಮಾಂಸ ಸಾಗಾಟ ಮಾಡುತ್ತಿರುವ ಕುರಿತು ಭಜರಂಗದಳ ಕಾರ್ಯಕರ್ತರಿಗೆ ಮಾಹಿತಿ ದೊರಕಿದ್ದು, ಅವರು ಕದ್ರಿ ದೇವಸ್ಥಾನದ ಬಳಿ ವಾಹನವನ್ನು ತಡೆದು ಪರಿಶೀಲನೆ ಮಾಡಿದಾಗ ಅದರಲ್ಲಿ ಗೋ ಮಾಂಸ ಇರುವುದು ಪತ್ತೆಯಾಗಿದೆ. ಬಳಿಕ ಈ ಕುರಿತು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.
ಪೊಲೀಸರು ತಕ್ಷಣವೇ ಸ್ಥಳಕ್ಕಾಗಮಿಸಿ ಪರಿಶೀಲನೆ ನಡೆಸಿದ ಸಂದರ್ಭ ವಾಹನದಲ್ಲಿ ಸುಮಾರು 100 ಕೆಜಿಗೂ ಅಧಿಕ ಗೋ ಮಾಂಸ ಇರುವುದು ಪತ್ತೆಯಾಗಿದೆ. ನಂತರ ಪೊಲೀಸರು ಗೋ ಮಾಂಸ ಹಾಗೂ ವಾಹನವನ್ನು ಜಪ್ತಿ ಮಾಡಿ ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ. ಈ ಕುರಿತು ಕದ್ರಿ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ ಎಂದು ಪೊಲೀಸ್ ಮೂಲದಿಂದ ತಿಳಿದಿದೆ.