image image
ಬ್ರೇಕಿಂಗ್ ನ್ಯೂಸ್
ಬ್ರೇಕಿಂಗ್ ನ್ಯೂಸ್

ಮಾದಕ ವಸ್ತು, ಅಕ್ರಮ ಶಸ್ತ್ರಾಸ್ತ್ರ ಮಾರಾಟ: ಐವರು ಅಂತಾರಾಜ್ಯ ಕುಖ್ಯಾತ ಕ್ರಿಮಿನಲ್‌ಗಳ ಸೆರೆ

ಮಾದಕ ವಸ್ತು, ಅಕ್ರಮ ಶಸ್ತ್ರಾಸ್ತ್ರ ಮಾರಾಟ: ಐವರು ಅಂತಾರಾಜ್ಯ ಕುಖ್ಯಾತ ಕ್ರಿಮಿನಲ್‌ಗಳ ಸೆರೆ

ಮಂಗಳೂರು: ಮಾದಕ ವಸ್ತು ಹಾಗೂ ಅಕ್ರಮ ಪಿಸ್ತೂಲ್ ಸಾಗಾಟ, ಮಾರಾಟಕ್ಕೆ ಸಂಬಂಧಿಸಿ ಮೂರು ಪ್ರತ್ಯೇಕ ಪ್ರಕರಣಗಳಲ್ಲಿ ಬೇಕಾಗಿದ್ದ ಐವರು ಅಂತಾರಾಜ್ಯ ಕುಖ್ಯಾತ ಕ್ರಿಮಿನಲ್‌ಗಳನ್ನು ಸಿಸಿಬಿ ಪೊಲೀಸರು 24 ಗಂಟೆ ಅವಧಿಯಲ್ಲಿ ಬಂಧಿಸಿದ್ದಾರೆ.

ಕಾರ್ಯಾಚರಣೆ ವೇಳೆ ಕೇರಳ- ಕರ್ನಾಟಕ ರಾಜ್ಯಗಳಲ್ಲಿ ಹಲವು ಪ್ರಕರಣಗಳಲ್ಲಿ ಭಾಗಿಯಾದ ಕಾಸರಗೋಡು ಜಿಲ್ಲೆಯ ನೌಫಲ್(38), ಮನ್ಸೂರ್(36), ಮೊಹಮ್ಮದ್ ಅಸ್ಕರ್(27), ಮೊಹಮ್ಮದ್ ಸಾಲಿ(31), ಕೊಯಿಕ್ಕೋಡ್ ಜಿಲ್ಲೆಯ ಅಬ್ದುಲ್ ಲತೀಫ್ ಯಾನೆ ತೋಕು ಲತೀಫ್‌ನನ್ನು ಪೊಲೀಸರು ಬಂಧಿಸಿದ್ದಾರೆ. ಆರೋಪಿಗಳಿಂದ 3 ಪಿಸ್ತೂಲ್, 6 ಸಜೀವ ಮದ್ದು ಗುಂಡುಗಳು ಹಾಗೂ 12.895 ಕೆ.ಜಿ ಗಾಂಜಾ, 3 ಕಾರು ಹಾಗೂ ಇತರ ಸೊತ್ತುಗಳ ವಶಪಡಿಸಿಕೊಂಡಿದ್ದಾರೆ.

ಆರೋಪಿ ಅಬ್ದುಲ್‌ ಲತೀಫ್ ಇತ್ತೀಚೆಗೆ ಮಂಗಳೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ದಾಖಲಾದ ಶೂಟೌಟ್ ಪ್ರಕರಣದಲ್ಲಿ ಭಾಗಿಯಾಗಿದ್ದ ಆರೋಪಿಗೆ ಪಿಸ್ತೂಲ್ ನೀಡಿದ ಆರೋಪಿ. ಈತನಿಗಾಗಿ ಶೋಧ ನಡೆಸಲಾಗುತಿತ್ತು ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Category
ಕರಾವಳಿ ತರಂಗಿಣಿ