ಮಂಗಳೂರು: ರಾಜ್ಯ ಅಲ್ಪಸಂಖ್ಯಾತ ಆಯೋಗದ ಮಾಜಿ ಅಧ್ಯಕ್ಷ ಅನ್ವರ್ ಮಾಣಿಪ್ಪಾಡಿಗೆ ಜೀವ ಬೆದರಿಕೆ ಕರೆಗಳು ( life threatning call)ಬಂದಿರುವ ಬಗ್ಗೆ ವರದಿಯಾಗಿದೆ. ಕೇಂದ್ರ ಸರ್ಕಾರವು ಲೋಕಸಭೆ ಮತ್ತು ರಾಜ್ಯಸಭೆಯಲ್ಲಿ ವಕ್ ತಿದ್ದುಪಡಿ ಮಸೂದೆಗೆ ಅನುಮೋದನೆ ಪಡೆದ ಬೆನ್ನಲ್ಲೇ ಈ ಬೆದರಿಕೆ ಕರೆಗಳು ಬಂದಿದ್ದು, ಈಗ ಅನ್ವರ್ ಮಾಣಿಪ್ಪಾಡಿ (Anwar manippadi) ಮಂಗಳೂರು ನಗರ ಪೊಲೀಸ್ ಆಯುಕ್ತ ಅನುಪಮ್ ಅಗರವಾಲ್ ಗೆ ದೂರು ನೀಡಿದ್ದಾರೆ ಎನ್ನಲಾಗಿದೆ. ಇಂಟರ್‌ನೆಟ್ ಮೂಲಕ ಬಂದಿರುವ ಬೆದರಿಕೆ ಕರೆಯಲ್ಲಿ ಹಿಂದಿ, ಮರಾಠಿ, ಇಂಗ್ಲೀಷ್, ತುಳು ಹಾಗೂ ಉತ್ತರ ಭಾರತದ ಭಾಷೆಗಳಲ್ಲಿ ಕರೆ ಬಂದಿವೆ ಎಂದು ದೂರಿನಲ್ಲಿ ಉಲ್ಲೇಖಿಸಿದ್ದಾರೆ.
ಬೆದರಿಕೆ ಕರೆ ಮಾಡಿ ನೀವು ಹೆಚ್ಚು ದಿನ ಉಳಿಯುವುದಿಲ್ಲ, ನಿನ್ನ ಸಮುದಾಯ ನಿನ್ನನ್ನು ಬಿಡುವುದಿಲ್ಲ ಎಂದು ಬೆದರಿಕೆ ಹಾಕಿದ್ದಾರೆ ಎನ್ನಲಾಗಿದ್ದು, ಸದ್ಯ ಮಾಣಿಪ್ಪಾಡಿ ಅವರು ಮಂಗಳೂರಿನಲ್ಲಿದ್ದು ದೂರು ಆಧರಿಸಿ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.