image image
ಬ್ರೇಕಿಂಗ್ ನ್ಯೂಸ್
ಬ್ರೇಕಿಂಗ್ ನ್ಯೂಸ್

ಐಷಾರಾಮಿ ಜೀವನ ನಡೆಸುವ ಆಸೆಯಿಂದ ಗಾಂಜಾ ದಂದೆ: ಮೂರು ಆರೋಪಿಗಳು ಪೊಲೀಸ್ ವಶಕ್ಕೆ!

ಐಷಾರಾಮಿ ಜೀವನ ನಡೆಸುವ ಆಸೆಯಿಂದ ಗಾಂಜಾ ದಂದೆ: ಮೂರು ಆರೋಪಿಗಳು ಪೊಲೀಸ್ ವಶಕ್ಕೆ!

ಮಂಗಳೂರು ಸಿಸಿಬಿ ಪೊಲೀಸರು ನಡೆಸಿದ ಯಶಸ್ವಿ ಕಾರ್ಯಾಚರಣೆಯಲ್ಲಿ ನಿಷೇಧಿತ ಮಾದಕ ವಸ್ತುವಾದ ಎಂಡಿಎಂಎ ಮಾರಾಟ ಮಾಡುತ್ತಿದ್ದ ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ. ಬಂಧಿತ ಆರೋಪಿಗಳನ್ನು ಮೊಹಮ್ಮದ್ ಆಸೀಫ್ (24), ಅಸ್ಗರ್ ಆಲಿ (31) ಮತ್ತು ಮೊಹಮ್ಮದ್ ರಶೀಮ್ (24) ಎಂದು ಗುರುತಿಸಲಾಗಿದೆ. ಪೊಲೀಸರ ಪ್ರಕಾರ, ಆರೋಪಿಗಳು ಬೆಂಗಳೂರಿನಿಂದ ಖಾಸಗಿ ಬಸ್‌ನಲ್ಲಿ ಪಾರ್ಸೆಲ್ ಮೂಲಕ ಎಂಡಿಎಂಎ ತರಿಸಿಕೊಂಡು, ಇನ್ನೋವಾ ಕಾರಿನಲ್ಲಿ ಸುರತ್ಕಲ್ ಪರಿಸರದ ಮುಕ್ಕ-ಮಾಲೆಮಾರ್ ಬೀಚ್ ರಸ್ತೆಯಲ್ಲಿ ಸಾರ್ವಜನಿಕರಿಗೆ ಹಾಗೂ ವಿದ್ಯಾರ್ಥಿಗಳಿಗೆ ಮಾರಾಟ ಮಾಡುತ್ತಿದ್ದರು. ಖಚಿತ ಮಾಹಿತಿ ಮೇರೆಗೆ ಕಾರ್ಯಾಚರಣೆ ನಡೆಸಿದ ಸಿಸಿಬಿ ಪೊಲೀಸರು, ಎಂಡಿಎಂಎ ಮಾರಾಟ ಮಾಡುತ್ತಿದ್ದ ಇನ್ನೋವಾ ಕಾರನ್ನು ಪತ್ತೆಹಚ್ಚಿ ಮೂವರನ್ನು ಬಂಧಿಸಿದ್ದಾರೆ.

ಆರೋಪಿಗಳಿಂದ ರೂ. 1 ಲಕ್ಷ ಮೌಲ್ಯದ 10 ಗ್ರಾಂ ಎಂಡಿಎಂಎ, ರೂ. 4000 ನಗದು, 4 ಮೊಬೈಲ್ ಫೋನ್‌ಗಳು ಮತ್ತು KA-31-N-6311 ನೋಂದಣಿ ಸಂಖ್ಯೆಯ ಟೊಯೊಟಾ ಇನ್ನೋವಾ ಕಾರನ್ನು ವಶಪಡಿಸಿಕೊಳ್ಳಲಾಗಿದೆ. ವಶಪಡಿಸಿಕೊಂಡ ಸೊತ್ತುಗಳ ಒಟ್ಟು ಮೌಲ್ಯ ರೂ. 9,24,000 ಎಂದು ಅಂದಾಜಿಸಲಾಗಿದೆ. ಈ ಸಂಬಂಧ ಸುರತ್ಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ಪೊಲೀಸರು ತಿಳಿಸಿರುವಂತೆ, ಆರೋಪಿಗಳು ಅಕ್ರಮ ಲಾಭ ಗಳಿಸುವ ಉದ್ದೇಶದಿಂದ ಈ ಕೃತ್ಯದಲ್ಲಿ ತೊಡಗಿದ್ದರು. ಮಾದಕ ವಸ್ತು ಮಾರಾಟ ಜಾಲದಲ್ಲಿ ಇನ್ನೂ ಹಲವರು ಭಾಗಿಯಾಗಿದ್ದು, ಅವರನ್ನು ಪತ್ತೆಹಚ್ಚುವ ಕಾರ್ಯ ಮುಂದುವರೆದಿದೆ. ಬಂಧಿತ ಆರೋಪಿಗಳ ಪೈಕಿ ಮೊಹಮ್ಮದ್ ಅಸೀಫ್ ಎಂಬಾತನ ವಿರುದ್ಧ ಈ ಹಿಂದೆ ಸುರತ್ಕಲ್ ಪೊಲೀಸ್ ಠಾಣೆಯಲ್ಲಿ ಮಾದಕ ವಸ್ತು ಮಾರಾಟ ಮತ್ತು ಹಲ್ಲೆ ಪ್ರಕರಣಗಳು ಸೇರಿದಂತೆ ಎರಡು ಪ್ರಕರಣಗಳು ದಾಖಲಾಗಿವೆ. ಆರೋಪಿಗಳು ಐಷಾರಾಮಿ ಜೀವನ ನಡೆಸುವ ಆಸೆಯಿಂದ ಈ ದಂಧೆಯಲ್ಲಿ ತೊಡಗಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.

ಸಿಸಿಬಿ ಘಟಕದ ಎಸಿಪಿ ಮನೋಜ್ ಕುಮಾರ್ ನಾಯ್ಕ್ ಅವರ ಮಾರ್ಗದರ್ಶನದಲ್ಲಿ, ಪೊಲೀಸ್ ನಿರೀಕ್ಷಕರಾದ ರಫೀಕ್ ಕೆ ಎಂ ಅವರ ನೇತೃತ್ವದಲ್ಲಿ ಪಿಎಸ್‌ಐ ಶರಣಪ್ಪ ಭಂಡಾರಿ ಮತ್ತು ಸಿಸಿಬಿ ಸಿಬ್ಬಂದಿಯವರು ಈ ಯಶಸ್ವಿ ಕಾರ್ಯಾಚರಣೆ ನಡೆಸಿದ್ದಾರೆ.

Category
ಕರಾವಳಿ ತರಂಗಿಣಿ