image image
ಬ್ರೇಕಿಂಗ್ ನ್ಯೂಸ್
ಬ್ರೇಕಿಂಗ್ ನ್ಯೂಸ್

ಬಿಹಾರ ಮೂಲದ ಯುವತಿಯ ಗ್ಯಾಂಗ್ ರೇಪ್ ಪ್ರಕರಣ : ಮೂವರ ಬಂಧನ.....

ಬಿಹಾರ ಮೂಲದ ಯುವತಿಯ ಗ್ಯಾಂಗ್ ರೇಪ್ ಪ್ರಕರಣ : ಮೂವರ ಬಂಧನ.....

ಮಂಗಳೂರು : ಪಶ್ಚಿಮ ಬಂಗಾಳದಿಂದ ಉದ್ಯೋಗಕ್ಕೆ ಬಂದು ಕೇರಳದ ಉಪ್ಪಳದಲ್ಲಿ ವಾಸವಾಗಿದ್ದ ಯುವತಿಯನ್ನು ಉಳ್ಳಾಲ ಠಾಣಾ ವ್ಯಾಪ್ತಿಯಲ್ಲಿ ಏಪ್ರಿಲ್ 16 ರ ರಾತ್ರಿ ಸಾಮೂಹಿಕ ಅತ್ಯಾಚಾರ ಮಾಡಲಾಗಿದೆ.  ಈ ಸಂಬಂಧ ಅಟೋ ಚಾಲಕ ಸೇರಿ ಮೂವರನ್ನು ಉಳ್ಳಾಲ ಪೊಲೀಸರು ಬಂಧಿಸಿದ್ದು, ಬಂಧಿತರನ್ನು ಮಿಥುನ್ ಕುಂಪಲ, ಮನೀಷ್, ಪ್ರಭುರಾಜ್ ಎಂದು ತಿಳಿದುಬಂದಿದೆ.

ಉಪ್ಪಳದಲ್ಲಿ ವಾಸವಾಗಿದ್ದ ಯುವತಿ ಸ್ನೇಹಿತನ ಜೊತೆಯಲ್ಲಿ ಕೆಲಸ ಹುಡುಕಿಕೊಂಡು ಮಂಗಳೂರಿಗೆ ಬಂದಿದ್ದು, ಇಲ್ಲಿ ಇಬ್ಬರಿಗೂ ಜಗಳವಾಗಿ ಬೇರೆ ಬೇರೆಯಾಗಿದ್ದಾರೆ. ಈ ವೇಳೆ ಜಗಳದಲ್ಲಿ ಯುವತಿಯ ಮೊಬೈಲ್ ಪುಡಿಯಾಗಿದ್ದು ದಾರಿ ತೋಚದೆ ಕಂಗಾಲಾಗಿದ್ದಾಳೆ. ಇದೇ ಸಮಯದಲ್ಲಿ ಬಗಂಬಿಲದ ಅಟೋ ಚಾಲಕನೊಬ್ಬ ಆಕೆಗೆ ಸಹಾಯ ಮಾಡಲು ಮುಂದಾಗಿದ್ದು, ಆಕೆಯ ಮೊಬೈಲ್‌ ರಿಪೇರಿ ಮಾಡಲು ಸಹಾಯ ಮಾಡಿದ್ದಾನೆ. ಬಳಿಕ ಆಕೆಗೆ ತಿನ್ನಲು ಆಹಾರ ತೆಗೆದುಕೊಟ್ಟಿದ್ದಾನೆ. ಇದರಿಂದ ಆತನ ಮೇಲೆ ವಿಶ್ವಾಸದಿಂದ ತನ್ನನ್ನು ರೈಲ್ವೇ ಸ್ಟೇಷನ್ ತನಕ ಬಿಡುವಂತೆ ಕೋರಿಕೊಂಡಿದ್ದಾಳೆ. ಇದಾದ ಬಳಿಕ ಅಟೋ ಏರಿದ ಯುವತಿ ಪ್ರಜ್ಞೆ ಕಳೆದುಕೊಂಡಿದ್ದು ಎಚ್ಚರವಾದಾಗ ಅಟೋ ಚಾಲಕ ಅಲ್ಲದೆ ಇತರ ಮೂವರ ಜೊತೆ ಕಾರಿನಲ್ಲಿ ಇದ್ದುದಾಗಿ ಪೊಲೀಸರಿಗೆ ಹೇಳಿಕೆ ನೀಡಿದ್ದಾಳೆ. ಎಚ್ಚರವಾಗಿ ಬೊಬ್ಬೆ ಹೊಡೆದ ಯುವತಿಯನ್ನು ನಡು ರಸ್ತೆಯಲ್ಲಿ ಇಳಿಸಿ ಆರೋಪಿಗಳು ಪರಾರಿಯಾಗಿದ್ದಾರೆ.

ಬಳಿಕ ಯುವತಿ ಮನೆಯೊಂದರ ಬಾಗಿಲು ತಟ್ಟಿ ನೀರು ಕೇಳಿ ಅಲ್ಲೇ ಪ್ರಜ್ಞೆ ತಪ್ಪಿ ಬಿದ್ದಿದ್ದಾಳೆ. ತಕ್ಷಣ ಮನೆಯವರು ಪೊಲೀಸರಿಗೆ ಕರೆ ಮಾಡಿ ಮಾಹಿತಿ ನೀಡಿದ್ದು, ಯುವತಿಯನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಬಗಂಬಿಲದ ಅಟೋ ಚಾಲಕನನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.

Category
ಕರಾವಳಿ ತರಂಗಿಣಿ