image image
ಬ್ರೇಕಿಂಗ್ ನ್ಯೂಸ್
ಬ್ರೇಕಿಂಗ್ ನ್ಯೂಸ್

ಬಸ್ಸಿನಲ್ಲಿ ನಿದ್ದೆಗೆ ಜಾರಿದ್ದ ಯುವತಿಯ ಜೊತೆ ಅನುಚಿತ ವರ್ತನೆ: ಬಸ್ ನಿರ್ವಾಹಕ ಪೊಲೀಸ್‌ ವಶಕ್ಕೆ

ಬಸ್ಸಿನಲ್ಲಿ ನಿದ್ದೆಗೆ ಜಾರಿದ್ದ ಯುವತಿಯ ಜೊತೆ ಅನುಚಿತ ವರ್ತನೆ: ಬಸ್ ನಿರ್ವಾಹಕ ಪೊಲೀಸ್‌ ವಶಕ್ಕೆ

ಮಂಗಳೂರು: ಮಂಗಳೂರು- ಮುಡಿಪು ಮಾರ್ಗವಾಗಿ ಸಂಚರಿಸುವ ಸರಕಾರಿ ಬಸ್ಸೊಂದರಲ್ಲಿ ನಿದ್ದೆಗೆ ಜಾರಿದ್ದ ಯುವತಿಯೊಬ್ಬಳ ಜೊತೆಗೆ ಅನುಚಿತವಾಗಿ ವರ್ತಿಸಿದ ಆರೋಪದಲ್ಲಿ ಬಸ್‌ ನಿರ್ವಾಹಕನನ್ನು ಕೊಣಾಜೆ ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಬಾಗಲಕೋಟೆ ಮೂಲದ ಪ್ರದೀಪ್ ಕಾಶಪ್ಪ (35) ಬಂದಿ ಆರೋಪಿಯಾಗಿದ್ದು,  ಬುಧವಾರ ಮುಡಿಪುವಿನಿಂದ ಮಂಗಳೂರಿಗೆ ಈ ಸರಕಾರಿ ಬಸ್ ಸಂಚರಿಸುವ ವೇಳೆ ಘಟನೆ ನಡೆದಿದೆ ಎನ್ನಲಾಗಿದೆ. ಆರೋಪಿ ಬಸ್ ನಿರ್ವಾಹಕ ಪ್ರದೀಪ್ ಕಾಶಪ್ಪ ಪ್ರಯಾಣದ ವೇಳೆ ನಿದ್ದೆಗೆ ಜಾರಿದ್ದ ಯುವತಿಯೊಬ್ಬಳನ್ನು ದೇಹದ ಖಾಸಗಿ ಭಾಗವನ್ನು ಸ್ಪರ್ಶಿಸಲು ಯತ್ನಿಸಿದ್ದು, ಈ ಸಂದರ್ಭದಲ್ಲಿ ಸಹ ಪ್ರಯಾಣಿಕರೊಬ್ಬರು ಈ ದೃಶ್ಯವನ್ನು ಸೆರೆ ಹಿಡಿದಿದ್ದರು. ಈ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದ್ದಂತೆಯೇ ಪೊಲೀಸರು ಆತನನ್ನು ವಶಕ್ಕೆ ಪಡೆದಿದ್ದು, ತನಿಖೆ ನಡೆಸುತ್ತಿದ್ದಾರೆ ಎಂದು ಪೊಲೀಸ್ ಮೂಲಗಳಿಂದ ತಿಳಿದಿದೆ

Category
ಕರಾವಳಿ ತರಂಗಿಣಿ