ಮಂಗಳೂರು: ನಗರ ಹೊರವಲಯದ ಕುಡುಪು ಸೇತುವೆ ಬಳಿ ಅಪರಿಚಿತ ವ್ಯಕ್ತಿಯ ಕೊಲೆ (murder)ಯಾಗಿರುವ ಘಟನೆ ರವಿವಾರ ಸಂಜೆ ವರದಿಯಾಗಿದೆ.
ಮೃತನಾಗಿರುವ ವ್ಯಕ್ತಿ ಕೂಲಿ ಕಾರ್ಮಿಕ ಎಂದು ತಿಳಿದು ಬಂದಿದ್ದು, ಕಲ್ಲಿನಿಂದ ಜಜ್ಜಿ ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದೆ. ಸ್ಥಳಕ್ಕೆ ಮಂಗಳೂರು ಗ್ರಾಮಾಂತರ ಠಾಣೆಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ, ಕೊಲೆಯಾದ ವ್ಯಕ್ತಿಯ ಮಾಹಿತಿ ಕಲೆ ಹಾಕುತ್ತಿದ್ದಾರೆ ಎಂದು ಪೊಲೀಸ್ ಮಾಹಿತಿಯಿಂದ ತಿಳಿದಿದೆ.