ಮಂಗಳೂರು: ನಗರದ ಹೊರವಲಯದ ಕಣ್ಣೂರಿನಲ್ಲಿ ಶುಕ್ರವಾರ ಮುಂಜಾನೆ ರಸ್ತೆ ಬದಿ ನಿಂತಿದ್ದ ನೌಶಾದ್ ಎಂಬ ಯುವಕರೋರ್ವರಿಗೆ ಚೂರಿಯಿಂದ ಇರಿದ ಘಟನೆ ವರದಿಯಾಗಿದೆ.
ತೊಕ್ಕೊಟ್ಟು ಸಮೀಪದ ಕಲ್ಲಾಪು ಮಾರ್ಕೆಟ್‌ಗೆ ತೆರಳಲು ನೌಶಾದ್ ಮುಂಜಾನೆ 3ಗಂಟೆ ಸುಮಾರಿಗೆ ಅಡ್ಯಾರ್ ಕಣ್ಣೂರು ಹೆದ್ದಾರಿಯಲ್ಲಿ ನಿಂತಿದ್ದರು. ಈ ವೇಳೆ ಎರಡು ದ್ವಿಚಕ್ರ ವಾಹನಗಳಲ್ಲಿ ಆಗಮಿಸಿದ ನಾಲ್ವರು ದುಷ್ಕರ್ಮಿಗಳು ನೌಷಾದ್ ಬೆನ್ನಿಗೆ ಚೂರಿಯಿಂದ ಇರಿದ್ದಾರೆ ಎನ್ನಲಾಗಿದೆ. ತಕ್ಷಣ ನೌಶಾದ್ ಅವರು ಓಡಿ ತಪ್ಪಿಸಿಕೊಂಡಿದ್ದು, ಬಳಿಕ ಸ್ಥಳೀಯರು ಅವರನ್ನು ನಗರದ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ಆದರೆ ಘಟನೆಗೆ ನಿಖರವಾದ ಕಾರಣ ತಿಳಿದುಬಂದಿಲ್ಲ.