image image
ಬ್ರೇಕಿಂಗ್ ನ್ಯೂಸ್
ಬ್ರೇಕಿಂಗ್ ನ್ಯೂಸ್

ಚಾಕುವಿನಿಂದ ಇರಿದು ಯುವಕನ ಕೊಲೆ..!

ಚಾಕುವಿನಿಂದ ಇರಿದು ಯುವಕನ ಕೊಲೆ..!

ನೆಲ್ಯಾಡಿ: ಚಾಕುವಿನಿಂದ ಇರಿದು ಯುವಕನೋರ್ವನನ್ನು ಹತ್ಯೆ ಮಾಡಿದ ಘಟನೆ ಶುಕ್ರವಾರ ರಾತ್ರಿ ನೆಲ್ಯಾಡಿ ಹೊರ ಠಾಣೆ ವ್ಯಾಪ್ತಿಯ ಮಾದೇರಿ ಸಮೀಪ ಸಂಭವಿಸಿದೆ. ಮೃತ ಯುವಕನನ್ನು ಮಾದೇರಿ ನಿವಾಸಿ ಶರತ್ ಎಂದು ತಿಳಿದು ಬಂದಿದೆ.

ಮನೆಯ ಅಂಗಳದಲ್ಲಿ ಶರತ್ ನನ್ನು ಚಾಕುವಿನಿಂದ ಇರಿದು ಕೊಲೆಗೈಯಲಾಗಿದ್ದು, ಕೌಟುಂಬಿಕ ಕಲಹ ಘಟನೆಗೆ ಕಾರಣ ಎಂದು ಪೊಲೀಸರು ತಿಳಿಸಿದ್ದಾರೆ. ಸ್ಥಳಕ್ಕೆ ನೆಲ್ಯಾಡಿ ಹೊರ ಠಾಣೆಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಪೊಲೀಸರು ತನಿಖೆ ನಡೆಸುತ್ತಿದ್ದಾರೆ ಎಂದು ತಿಳಿದುಬಂದಿದೆ.

Category
ಕರಾವಳಿ ತರಂಗಿಣಿ