image image
ಬ್ರೇಕಿಂಗ್ ನ್ಯೂಸ್
ಬ್ರೇಕಿಂಗ್ ನ್ಯೂಸ್

ಬಂಟ್ವಾಳ ಹತ್ಯೆ ಪ್ರಕರಣ: ದೀಪಕ್, ಸುಮಿತ್ ಸೇರಿ 15 ಮಂದಿ ವಿರುದ್ಧ ಪ್ರಕರಣ ದಾಖಲು

ಬಂಟ್ವಾಳ ಹತ್ಯೆ ಪ್ರಕರಣ: ದೀಪಕ್, ಸುಮಿತ್ ಸೇರಿ 15 ಮಂದಿ ವಿರುದ್ಧ ಪ್ರಕರಣ ದಾಖಲು

ಬಂಟ್ವಾಳ: ತಾಲೂಕಿನ ಕುರಿಯಾಳ ಗ್ರಾಮದ ಈರಾಕೋಡಿ ಎಂಬಲ್ಲಿ ಕೊಳತ್ತಮಜಲು ಜುಮ್ಮಾ ಮಸೀದಿ ಕಾರ್ಯದರ್ಶಿ ಪಿಕಪ್ ಚಾಲಕ ಅಬ್ದುಲ್ ರಹಿಮಾನ್ ( 32) ಹತ್ಯೆ ಮತ್ತು ಕಲಂದರ್ ಶಾಫಿ ಮೇಲಿನ ಕೊಲೆಯತ್ನ ಪ್ರಕರಣ ಸಂಬಂಧ  ದೀಪಕ್ ಮತ್ತು ಸುಮಿತ್ ಸೇರಿ ಒಟ್ಟು 15 ಮಂದಿಯ ವಿರುದ್ಧ ಪ್ರಕರಣ ದಾಖಲಾಗಿದೆ. ದೀಪಕ್ ಮತ್ತು ಸುಮಿತ್ ಕೊಲೆಯಾದ ಅಬ್ದುಲ್ ರಹಿಮಾನ್ ಮತ್ತು ಕಲಂದರ್ ಶಾಫಿ ಅವರಿಗೆ ಪರಿಚಯಸ್ಥರಾಗಿದ್ದರು ಎಂದು ತಿಳಿದು ಬಂದಿದೆ.

ಅಬ್ದುಲ್ ರಹಿಮಾನ್ ಮತ್ತು ಕಂದರ್ ಶಾಫಿ  ನದಿ ಬದಿಯಿಂದ ಪಿಕ್ ಅಪ್ ವಾಹನದಲ್ಲಿ ಮರಳು ಲೋಡ್ ಮಾಡಿ ಕುರಿಯಾಳ ಗ್ರಾಮದ ಈರಾ ಕೋಡಿಯ ರಾಜೀವಿ ಎಂಬವರ ಮನೆ ಬಳಿ ಇಳಿಸುವ ಸಮಯ ಪರಿಚಯಸ್ಥರಾದ ದೀಪಕ್, ಸುಮಿತ್ ಮತ್ತು 15 ಮಂದಿ ಏಕಾಏಕಿ ಚಾಲಕನ ಸೀಟಿನಲ್ಲಿದ್ದ ಅಬ್ದುಲ್ ರಹಿಮಾನ್ ಅವರನ್ನು ಹೊರಗೆ ಎಳೆದು ತಲವಾರು, ಚೂರಿಯಿಂದ ತಿವಿದು, ಕಡಿದರು, ಆಗ ಪಕ್ಕದಲ್ಲಿದ್ದ ನಾನು ತಡೆಯಲು ಹೋದಾಗ ಚೂರಿಯಿಂದ, ಎದೆಗೆ, ಬೆನ್ನಿಗೆ, ಕೈಗೆ, ತಿವಿದು ತಲವಾರ್ ನಿಂದ ಕಡಿದಿದ್ದಾರೆ. ಈ ವೇಳೆ ಅಲ್ಲಿದ್ದವರು ಬೊಬ್ಬೆ ಹಾಕಿದ್ದರಿಂದ ಹಲ್ಲೆ ಮಾಡಿದ ಆರೋಪಿಗಳು ಮಾರಕಾಸ್ತ್ರಗಳೊಂದಿಗೆ ಪರಾರಿಯಾಗಿದ್ದಾರೆ. ಹಲ್ಲೆಗೈದವರ ಪೈಕಿ ಇಬ್ಬರು ಪರಿಚಯಸ್ಥರು ಎಂದು ಹಲ್ಲೆಗೊಳಗಾಗಿ ಆಂಬ್ಯುಲೆನ್ಸ್ ನಲ್ಲಿ ಆಸ್ಪತ್ರೆಗೆ ಸಾಗಿಸುತ್ತಿದ್ದ ವೇಳೆ ಕಲಂದ‌ರ್ ಶಾಫಿ ಮಾಹಿತಿ ನೀಡಿದ್ದಾರೆ ಎಂದು ಅವರನ್ನು ಆಸ್ಪತ್ರೆಗೆ ದಾಖಲಿಸಿದ್ದ ಮುಹಮ್ಮದ್ ನಿಸಾರ್ ಎಂಬವರು ಬಂಟ್ವಾಳ ಗ್ರಾಮೀಣ ಪೊಲೀಸ್ ಠಾಣೆಗೆ ನೀಡಿರುವ ದೂರಿನಲ್ಲಿ ತಿಳಿಸಿದ್ದಾರೆ.

ದುಷ್ಕರ್ಮಿಗಳ ಗುಂಪು ಕೋಮು ಭಾವನೆಯಿಂದ ಅಥವಾ ಇನ್ನಾವುದೋ ಕಾರಣಕ್ಕೆ ಅಬ್ದುಲ್ ರಹಿಮಾನ್ ಅವರನ್ನು ಕೊಲೆಗೈದು, ಕಲಂದರ್ ಶಾಫಿ ಅವರನ್ನು ತೀವ್ರವಾಗಿ ಗಾಯಗೊಳಿಸಿ ಕೊಲೆ ಪ್ರಯತ್ನ ಮಾಡಿದ್ದಾರೆ. ಈ ಕೃತ್ಯದಲ್ಲಿ ಪರಿಚಯಸ್ಥರಾದ ದೀಪಕ್, ಸುಮಿತ್ ಮತ್ತು ಇತರರು ಭಾಗಿಯಾಗಿದ್ದಾರೆ ಎಂದು ದೂರುದಾರ ನಿಸಾರ್ ನೀಡಿರುವ ದೂರಿನಲ್ಲಿ ತಿಳಿಸಿದ್ದಾರೆ.

 ನಾಸೀರ್ ನೀಡಿದ ದೂರಿನಂತೆ ಬಂಟ್ವಾಳ ಪೊಲೀಸರು ಭಾರತೀಯ ನ್ಯಾಯ ಸಂಹಿತ 2023 (Uls-103, 109, 118(1), 118(2), 190, 191(1), 191(2), 191(3) ಪ್ರಕರಣ ದಾಖಲಿಸಿಕೊಂಡು ಮುಂದಿನ ಕಾನೂನು ಕ್ರಮಗಳನ್ನು ಕೈಗೊಂಡಿದ್ದಾರೆ.

Category
ಕರಾವಳಿ ತರಂಗಿಣಿ