ಮಂಗಳೂರು: ಸೆಮಿನಾರ್ ತಪ್ಪಿಸಲು ಓರ್ವ ವಿದ್ಯಾರ್ಥಿನಿ (Student) ತಾನು ವ್ಯಾಸಂಗ ಮಾಡುತ್ತಿರುವ ಮೆಡಿಕಲ್ ಕಾಲೇಜ್ ನಲ್ಲಿ (Medical College) ಬಾಂಬ್ ಇದೆ ಎಂದು ಹುಸಿ ಬೆದರಿಕೆ ಕರೆ ಮಾಡಿರುವ ಘಟನೆ ದಕ್ಷಿಣ ಕನ್ಬಡ (Dakshina Kannada) ಜಿಲ್ಲೆಯ ಉಳ್ಳಾಲದಲ್ಲಿ ನಡೆದಿದೆ.
ಪ್ರಕರಣ ಸಂಬಂಧ ಪೊಲೀಸರು ವಿದ್ಯಾರ್ಥಿನಿ ಡಾ.ಚಲಸಾನಿ ಮೋನಿಕಾ ಚೌಧರಿಯನ್ನು ಬಂಧಿಸಿದ್ದಾರೆ. ಡಾ.ಚಲಸಾನಿ ಮೋನಿಕಾ ಚೌಧರಿ ಜೂ.4 ರಂದು ಸೆಮಿನಾರ್ ಕೊಡಬೇಕಿತ್ತು. ಆದರೆ, ಈ ಸಮಿನಾರ್‌ನಿಂದ ತಪ್ಪಿಸಿಕೊಳ್ಳಲು ಮೋನಿಕಾ ಜೂನ್ 4ರ ಬೆಳಗ್ಗೆ 8.15ಕ್ಕೆ ತಾನು ಓದುತ್ತಿರುವ ಕಣಚೂರು ಮೆಡಿಕಲ್ ಕಾಲೇಜಿನ ಹೆರಿಗೆ ವಾರ್ಡ್ ಸ್ಥಿರ ದೂರವಾಣಿಗೆ ಕರೆ ಮಾಡಿ, “ಬೆಳಗ್ಗೆ 11ಕ್ಕೆ ಕಣಚೂರು ಆಸ್ಪತ್ರೆ ಸ್ಫೋಟಿಸುವುದಾಗಿ" ಬೆದರಿಕೆ ಹಾಕಿದ್ದಾರೆ.
ನಂತರ, ಮೋನಿಕಾ ಚೌಧರಿಯೇ ನಮ್ಮ ಕಾಲೇಜಿಗೆ ಬಾಂಬ್ ಬೆದರಿಕೆ ಕರೆ ಬಂದಿದೆ ಎಂದು ಉಳ್ಳಾಲ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ. ದೂರು ದಾಖಲಿಸಿಕೊಂಡು ಪೊಲೀಸರು ತನಿಖೆ ನಡೆಸಿದ್ದಾರೆ. ತನಿಖೆ ವೇಳೆ ತಾಂತ್ರಿಕ ವಿಶ್ಲೇಷಣೆ ನಡೆಸಿದಾಗ, ದೂರು ನೀಡಿದ ವಿದ್ಯಾರ್ಥಿನಿ ಡಾ.ಚಲಸಾನಿ ಮೋನಿಕಾ ಚೌಧರಿಯೇ ಬಾಂಬ್ ಬೆದರಿಕೆ ಹಾಕಿರುವುದು ಗೊತ್ತಾಗಿದೆ. ಈ ಹಿನ್ನೆಲೆಯಲ್ಲಿ ಉಳ್ಳಾಲ ಪೊಲೀಸರು ಡಾ.ಚಲಸಾನಿ ಮೋನಿಕಾ ಚೌಧರಿಯನ್ನು ಬಂಧಿಸಿದ್ದಾರೆ.
ಮೋನಿಕಾ ಚೌಧರಿಯನ್ನು ಬಂಧಿಸಿ ವಿಚಾರಣೆಗೆ ಒಳಪಡಿಸಿದಾಗ, ಹುಸಿ ಬಾಂಬ್ ಬೆದರಿಕೆ ಕರೆ ಮಾಡಿರುವ ಹಿಂದಿನ ಕಾರಣ ಗೊತ್ತಾಗಿದೆ.