image image
ಬ್ರೇಕಿಂಗ್ ನ್ಯೂಸ್
ಬ್ರೇಕಿಂಗ್ ನ್ಯೂಸ್

ಸಾಮಾಜಿಕ ಜಾಲತಾಣದಲ್ಲಿ ಕೋಮುದ್ವೇಷ, ಸುಳ್ಳು ಪ್ರಚಾರ ಆರೋಪ: ಓರ್ವನ ಬಂಧನ

ಸಾಮಾಜಿಕ ಜಾಲತಾಣದಲ್ಲಿ ಕೋಮುದ್ವೇಷ, ಸುಳ್ಳು ಪ್ರಚಾರ ಆರೋಪ: ಓರ್ವನ ಬಂಧನ

ಸುರತ್ಕಲ್‌: ಸಾಮಾಜಿಕ ಜಾಲತಾಣವಾದ ವಾಟ್ಸ್ ಆ್ಯಪ್ ನಲ್ಲಿ ಕೋಮು ದ್ವೇಷ ಮತ್ತು ಸುಳ್ಳು ಆರೋಪಗಳನ್ನು ಪ್ರಚಾರ ಮಾಡಿದ ಆರೋಪದಲ್ಲಿ ಸುರತ್ಕಲ್ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಓರ್ವನನ್ನು ಪೊಲೀಸರು ಬಂಧಿಸಿದ್ದಾರೆ.

ಕುಳಾಯಿ ಗ್ರಾಮದ ಕೆ.ಕೆ. ಶೆಟ್ಟಿ ಕಾಂಪೌಂಡ್ ನಿವಾಸಿ ರಾಮ ಪ್ರಸಾದ್ ಯಾನೆ ಪೋಚ(42) ಬಂಧಿತ ಆರೋಪಿ ಎಂದು ಪೊಲೀಸರು ತಿಳಿಸಿದ್ದು, ಇದೇ ಪ್ರಕರಣಕ್ಕೆ ಸಂಬಂಧಿಸಿದಂತೆ ಇನ್ನೋರ್ವ ಆರೋಪಿ, ಪಡುಬಿದ್ರೆ ಪೊಲೀಸ್ ಠಾಣಾ ವ್ಯಾಪ್ತಿಯ ಪ್ರಕರಣವೊಂದರಲ್ಲಿ ಭಾಗಿಯಾಗಿ ಪ್ರಸಕ್ತ ಉಡುಪಿ ಜಿಲ್ಲಾ ಕಾರಾಗೃಹದಲ್ಲಿರುವ ಸುರತ್ಕಲ್ ಕೋಡಿಕೆರೆ ನಿವಾಸಿ ಲೋಕೇಶ್ ಎಂಬಾತನನ್ನು ಬಾಡಿ ವಾರೆಂಟ್ ಪಡೆದು ಸುರತ್ಕಲ್ ಪೊಲೀಸರು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

Category
ಕರಾವಳಿ ತರಂಗಿಣಿ