image image
ಬ್ರೇಕಿಂಗ್ ನ್ಯೂಸ್
ಬ್ರೇಕಿಂಗ್ ನ್ಯೂಸ್

ಮೂಡಬಿದಿರೆ ಪೊಲೀಸರಿಂದ ಮಹೇಶ್ ವಿಕ್ರಮ ಹೆಗ್ಡೆ ಬಂಧನ..!

ಮೂಡಬಿದಿರೆ ಪೊಲೀಸರಿಂದ ಮಹೇಶ್ ವಿಕ್ರಮ ಹೆಗ್ಡೆ ಬಂಧನ..!

ಮಂಗಳೂರು: ಕೋಮು ದ್ವೇಷ ಹರಡುವ ರೀತಿ ಪೋಸ್ಟ್ ಮಾಡಿದ ಪೋಸ್ಟ್ ಕಾರ್ಡ್ ನ್ಯೂಸ್ ಸಂಸ್ಥಾಪಕ ಮಹೇಶ್‌ ವಿಕ್ರಂ ಹೆಗ್ಡೆ ಯನ್ನು ಮೂಡುಬಿದಿರೆ ಪೊಲೀಸರು ಬಂಧಿಸಿದ್ದಾರೆ.

ಮುಖ್ಯಮಂತ್ರಿಗಳೇ, ಗಣಪನ ಮೆರವಣಿಗೆಯ ಮೇಲೆ ಕಲ್ಲು ತೂರಿದವರ ಮಸೀದಿ ಮೇಲೆ ಬುಲ್ಲೋಜರ್ ನುಗ್ಗಿಸಿ ಎಂಬ ಶೀರ್ಷಿಕೆ ಇದ್ದ ಪೋಸ್ಟರ್ ಅನ್ನು ಮಹೇಶ್‌ ವಿಕ್ರಮ್ ಹೆಗ್ಡೆ ಸೋಷಿಯಲ್ ಮೀಡಿಯಾದಲ್ಲಿ ಪೋಸ್ಟ್ ಮಾಡಿದ್ದು, ಈ ಬಗ್ಗೆ ಸ್ವಯಂಪ್ರೇರಿತ ದೂರು ದಾಖಲಿಸಿಕೊಂಡಿರುವ ಮೂಡುಬಿದಿರೆ ಠಾಣೆ ಪೊಲೀಸರು ಕೋಮು ಪ್ರಚೋದನೆ ಆರೋಪದಲ್ಲಿ ಮಹೇಶ್ ವಿಕ್ರಮ ಹೆಗ್ಡೆ ಬಂಧಿಸಿದ್ದಾರೆ.

ಮೂಡಬಿದಿರೆ ಪಿಎಸ್ಸೆ ಕೃಷ್ಣಪ್ಪ ಅವರು ನೀಡಿದ ದೂರಿನ ಅನ್ವಯ ಸ್ವಯಂಪ್ರೇರಿತ ಎಫ್‌ಐಆ‌ರ್ ದಾಖಲಿಸಲಾಗಿತ್ತು. ಮಹೇಶ್ ವಿಕ್ರಂ ಹೆಗ್ಡೆ ಯನ್ನು ಕೋರ್ಟ್‌ಗೆ ಹಾಜರುಪಡಿಸಿದ್ದು, ಸೋಮವಾರದ ವರೆಗೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ ಎಂದು ಪ್ರಕಟಣೆಯಲ್ಲಿ ಮಾಹಿತಿ ನೀಡಿದ್ದಾರೆ.

Category
ಕರಾವಳಿ ತರಂಗಿಣಿ