image image
ಬ್ರೇಕಿಂಗ್ ನ್ಯೂಸ್
ಬ್ರೇಕಿಂಗ್ ನ್ಯೂಸ್

ಸೌಜನ್ಯ ಪರ ಹೋರಾಟಗಾರ ಮಹೇಶ್‌ ಶೆಟ್ಟಿ ತಿಮರೋಡಿ ಗಡಿಪಾರು

ಸೌಜನ್ಯ ಪರ ಹೋರಾಟಗಾರ ಮಹೇಶ್‌ ಶೆಟ್ಟಿ ತಿಮರೋಡಿ ಗಡಿಪಾರು

ಬೆಳ್ತಂಗಡಿ : ಸೌಜನ್ಯ ಪರ ಹೋರಾಟಗಾರ ಮಹೇಶ್‌ ಶೆಟ್ಟಿ ತಿಮರೋಡಿಯನ್ನು ರಾಯಚೂರು ಜಿಲ್ಲೆಯ ಮಾನ್ವಿಗೆ 1 ವರ್ಷ ಗಡಿಪಾರು ಮಾಡಲಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯಿಂದ ರಾಯಚೂರು ಜಿಲ್ಲೆಯ ಮಾನ್ವಿಗೆ ತಿಮರೋಡಿಯನ್ನ ಗಡಿಪಾರು ಮಾಡಿ ಪುತ್ತೂರು AC ಸ್ಟೆಲ್ಲಾ ವರ್ಗೀಸ್ ಆದೇಶ ಹೊರಡಿಸಿದ್ದಾರೆ.

ತಿಮರೋಡಿ ವಿರುದ್ಧ 32 ಕೇಸ್ ಇರೋ ಹಿನ್ನೆಲೆಯಲ್ಲಿ 1 ವರ್ಷದ ಅವಧಿಗೆ ಮಾನ್ವಿಗೆ ಗಡಿಪಾರು ಮಾಡಲಾಗಿದ್ದು, ಬುರುಡೆ ಪ್ರಕರಣ ಹಾಗೂ ಶವ ಹೂತಿಟ್ಟ ಪ್ರಕರಣದಲ್ಲಿ ಆರೋಪಿ ಚೆನ್ನಯ್ಯನಿಗೆ ಆಶ್ರಯ ನೀಡಿದ್ದ ಮಹೇಶ್‌ ಶೆಟ್ಟಿ ತಿಮರೋಡಿಯನ್ನ ಸಪ್ಟೆಂಬರ್ 20 ರಂದೇ ಪುತ್ತೂರು ಸಹಾಯಕ ಆಯುಕ್ತರು ಗಡಿಪಾರು ಮಾಡಿ ಆದೇಶ ಹೊರಡಿಸಿದ್ದಾರೆ. ಗಡಿಪಾರು ಮಾಡಿದ ಆದೇಶ ಪ್ರತಿ ಬಂಟ್ವಾಳ ಉಪವಿಭಾಗ ಡಿವೈಎಸ್ಪಿಗೆ ಬಂದ ಬಳಿಕ ಗಡಿಪಾರು ಮಾಡುವ ಕಾನೂನು ಕ್ರಮ ಕೈಗೊಳ್ಳಲಿದ್ದಾರೆ ಎನ್ನಲಾಗಿದೆ.

ಹೈಕೋರ್ಟ್ ನಲ್ಲಿ ಮೇಲ್ಮನವಿ ಸಲ್ಲಿಸಲು ಅವಕಾಶ ಇದೆ.

Category
ಕರಾವಳಿ ತರಂಗಿಣಿ