ಮಂಗಳೂರು: ಭೂಗತ ಪಾತಕಿ ಕಲಿ ಯೋಗೀಶ್ ಸಹಚರ, ಹಲವು ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಮುಲ್ಕಿ ಚಿತ್ರಾಪು ನಿವಾಸಿ ಶ್ರೀನಿವಾಸ್ ಶೆಟ್ಟಿ ಯಾನೆ ಶೀನು (45) ಎಂಬಾತನನ್ನು ಮುಲ್ಕಿ ಪೊಲೀಸರು ಬಂಧಿಸಿದ್ದಾರೆ.ಕೊಕಾ ಪ್ರಕರಣದ ಅರೋಪಿಯಾಗಿರುವ ಈತ 8 ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿ ಕೊಂಡಿದ್ದ. ಈತನ ವಿರುದ್ಧ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ವಾರೆಂಟ್ ಹೊರಡಿಸಿತ್ತು.ಅದರಂತೆ ಮಂಗಳೂರು ಉತ್ತರ ವಿಭಾಗದ ಎಸಿಪಿ ಶ್ರೀಕಾಂತ್‌ರ ಮಾರ್ಗದರ್ಶನದಲ್ಲಿ ಮುಲ್ಕಿ ಠಾಣೆಯ ನಿರೀಕ್ಷಕ ಮಂಜುನಾಥ ಬಿ. ಎಸ್. ಎಸ್ಸೆ ಉಮೇಶ್ ಕುಮಾರ್ ನೇತೃತ್ವದಲ್ಲಿ ಎಎಸ್ಸೆ ಸುರೇಶ್ ಕುಂದರ್, ಹೆಚ್‌ಸಿ ಉದಯ ಕಾರ್ಯಾಚರಣೆ ನಡೆಸಿ ಬಂಧಿಸಿದ್ದಾರೆ.ಆರೋಪಿಯನ್ನು ಶನಿವಾರ ನ್ಯಾಯಾಲಯದ ಮುಂದೆ ಹಾಜರುಪಡಿಸಲಾಗಿದ್ದು, ನ್ಯಾಯಾಲಯವು ನ್ಯಾಯಾಂಗ ಬಂಧನ ವಿಧಿಸಲಾಗಿದೆ.