image image
ಬ್ರೇಕಿಂಗ್ ನ್ಯೂಸ್
ಬ್ರೇಕಿಂಗ್ ನ್ಯೂಸ್

ಪಟಾಕಿ ಅಂಗಡಿಗಳಿಂದ ಸುಲಿಗೆ: ಇಬ್ಬರ ವಿರುದ್ಧ ಪ್ರಕರಣ ದಾಖಲು

ಪಟಾಕಿ ಅಂಗಡಿಗಳಿಂದ ಸುಲಿಗೆ: ಇಬ್ಬರ ವಿರುದ್ಧ ಪ್ರಕರಣ ದಾಖಲು

ಮಂಗಳೂರು: ಪಟಾಕಿ ಅಂಗಡಿಗಳ ಮಾಲಕರಿಗೆ ಬೆದರಿಕೆ ಹಾಕಿ ಸುಲಿಗೆ ಮಾಡಿರುವ ಆರೋಪದಲ್ಲಿ ಇಬ್ಬರ ವಿರುದ್ಧ ಬಟ್ಟೆ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸುರತ್ಕಲ್ ಮಂಗಳಪೇಟೆಯ ಫಾಝಿಲ್ ಕೊಲೆ ಆರೋಪಿ, ರೌಡಿ ಶೀಟರ್ ಪ್ರಶಾಂತ್ ಯಾನೆ ಪಚ್ಚು ಮತ್ತು ಅಶ್ವಿತ್‌ ಎಂಬವರ ವಿರುದ್ಧ ಪ್ರಕರಣ ದಾಖಲಾಗಿದೆ.ಆರೋಪಿಗಳು ಬಜ್ಜೆಯ ಪಟಾಕಿ ಮಾರಾಟ ಮಳಿಗೆಗಳಿಗೆ ತೆರಳಿ ಹಣ ಕೊಡುವುದಿಲ್ಲ ಆದರೆ ಎಲ್ಲರೂ ಪಟಾಕಿ ಕೊಡಲೇಬೇಕು ಎಂದು ಬೆದರಿಸಿ ಸುಲಿಗೆ ಮಾಡಿದ್ದಾರೆ.

ಈ ಘಟನೆ ಅ.22ರಂದು ನಡೆದಿದ್ದು, ಪಟಾಕಿ ಅಂಗಡಿಗಳ ಮಾಲಕರು ಹೆದರಿ ಪೊಲೀಸ್ ದೂರು ನೀಡಲು ಹಿಂದೇಟು ಹಾಕಿದ್ದರು. ವಿಚಾರ ತಿಳಿದು ಪೊಲೀಸರು ರಕ್ಷಣೆ ನೀಡುವ ಭರವಸೆ ನೀಡಿದ ಬಳಿಕ ಪಟಾಕಿ ಅಂಗಡಿಯೊಂದರ ಮಾಲಕ ಬಜ್ಜೆ ಪೊಲೀಸ್‌ ಠಾಣೆಯಲ್ಲಿ  ದೂರು ದಾಖಲಿಸಿದ್ದರು.ಈ ದೂರನ್ನು ಆಧರಿಸಿ ಪ್ರಕರಣ ದಾಖಲಿಕೊಂಡಿರುವ ಪೊಲೀಸರು ತಲೆಮರೆಸಿಕೊಂಡಿರುವ ಆರೋಪಿಗಳಿಗಾಗಿ ಶೋಧ ಕಾರ್ಯಾಚರಣೆ ಮುಂದುವರಿಸಿದ್ದಾರೆ.

Category
ಕರಾವಳಿ ತರಂಗಿಣಿ