ಬೆಳ್ತಂಗಡಿ : ಧರ್ಮಸ್ಥಳ ಪ್ರಕರಣದ ಸಂಬಂಧ ತನಿಖೆ ಮಹತ್ವದ ಹಂತ ತಲುಪಿದ್ದು, ಎಸ್‌ಐಟಿ ಮುಖ್ಯಸ್ಥ ಪ್ರಣಬ್ ಮೊಹಾಂತಿ ಅವರು ಬೆಳ್ತಂಗಡಿ ಕಚೇರಿಗೆ ಇಂದು ಮಧ್ಯಾಹ್ನ ಆಗಮಿಸಿದ್ದಾರೆ. ಕಳೆದ ನಾಲ್ಕು ತಿಂಗಳಿನಿಂದ ನಡೆಯುತ್ತಿರುವ ಎಸ್‌ಐಟಿ ತನಿಖೆ ಇದೀಗ ಮಹತ್ವದ ಹಂತಕ್ಕೆ ತಲುಪಿದೆ. ಚಿನ್ನಯ್ಯ ತಂದಿದ್ದ ತಲೆಬುರುಡೆಗೆ ಸಂಬಂಧಿಸಿದಂತೆ ತನಿಖೆ ಪೂರ್ಣಗೊಂಡಿದ್ದು, ಇದರಲ್ಲಿ ಯಾವ ರೀತಿಯ ಕ್ರಮ ಕೈಗೊಳ್ಳಬೇಕು ಎಂಬ ಬಗ್ಗೆ ಎಸ್‌ಐಟಿ ತಂಡ ಅಂತಿಮ ನಿರ್ಧಾರಕ್ಕೆ ಬಂದಿದ್ದು, ಈ ಬಗ್ಗೆ ಮಹತ್ವದ ಸಭೆಗಳು ನಡೆಯಲಿದೆ ಎನ್ನಾಲಾಗಿದೆ.
ಸೋಮವಾರ ವಿಚಾರಣೆಗಾಗಿ ಹಾಜರಾಗಲು ಇದೀಗ ಮಹೇಶ್ ಶೆಟ್ಟಿ ತಿಮರೋಡಿ ಗಿರೀಶ್ ಮಟ್ಟಣ್ಣನವರ್, ಜಯಂತ್ ಟಿ, ಹಾಗೂ ವಿಠಲ ಗೌಡ ಅವರಿಗೆ ನೋಟೀಸ್ ನೀಡಲಾಗಿದ್ದು, ಬುರುಡೆಗೆ ಸಂಬಂಧಿಸಿದಂತೆ ಇವರ ವಿಚಾರಣೆ ಹಾಗೂ ಚಿನ್ನಯ್ಯ ನೀಡಿದ ಹೇಳಿಕೆಗಳ ಕುರಿತು ತನಿಖೆ ನಡೆಸುವ ಬಗ್ಗೆ ಎಸ್‌ಐಟಿ ಮಹತ್ವದ ನಿರ್ದಾರಗಳನ್ನು ತೆಗದುಕೊಳ್ಳುವ ನಿರೀಕ್ಷೆಯಿದೆ.
ಅಂತಿಮವಾಗಿ ಎಸ್‌ಐಟಿ ತನಿಖೆಯಲ್ಲಿ ಮುಂದಿನ ವಾರ ಅತ್ಯಂತ ಮಹತ್ವದ ಬೆಳವಣಿಗೆಗಳು ನಡೆಯುವ ನಿರೀಕ್ಷೆಯಿದ್ದು, ಜನತೆ ಕಾಯುತ್ತಿದೆ.